ಶನಿವಾರ, ಏಪ್ರಿಲ್ 17, 2021
32 °C

ವಿದ್ಯಾರ್ಥಿಗಳು ಅವಕಾಶ ಬಳಸಿಕೊಳ್ಳಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ವ್ಯಕ್ತಿತ್ವ ರೂಪಿಸಿಕೊಂಡು ಭವ್ಯ ಭಾರತ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಸಚಿವ ಎಸ್. ಸುರೇಶ್‌ಕುಮಾರ್ ಅಭಿಪ್ರಾಯಪಟ್ಟರು.ಜಯನಗರ ಶೈಕ್ಷಣಿಕ ಸಮಿತಿಯು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.‘ಸಮಿತಿಯು ಜಯನಗರ, ಜೆ.ಪಿ.ನಗರ ವ್ಯಾಪ್ತಿಯಲ್ಲಿನ ಸರ್ಕಾರಿ, ಅನುದಾನಿತ ಹಾಗೂ ಬಿಬಿಎಂಪಿ ಶಾಲೆಗಳ ಸಾವಿರಾರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯ’ ಎಂದರು.ಜಯನಗರ ಶೈಕ್ಷಣಿಕ ಸಮಿತಿ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಿ.ಎನ್. ವಿಜಯಕುಮಾರ್, ‘ವಿದ್ಯಾರ್ಥಿಗಳು ಇಂತಹ ಶೈಕ್ಷಣಿಕ ತರಬೇತಿಗಳ ಪ್ರಯೋಜನ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಬೆಳವಣಿಗೆಗೆ ಸಂಸ್ಥೆಯು ಪ್ರತಿ ವರ್ಷ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ’ ಎಂದರು.ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಪಿ. ಹನುಮಂತರಾಯಪ್ಪ, ವಿಜಯ ಅಕಾಡೆಮಿ ಫಾರ್ ಇನ್‌ಫಾರ್ಮೇಶನ್ ಟೆಕ್ನಾಲಜಿಯ ಡೀನ್ ಡಾ.ಕೆ. ಶೇಷಮೂರ್ತಿ, ಬೆಂಗಳೂರು ಹೈಯರ್ ಎಜುಕೇಶನ್ ಸೊಸೈಟಿಯ ಜಂಟಿ ಕಾರ್ಯದರ್ಶಿ ಡಾ.ಕೆ.ಎಸ್. ಸಮೀರಸಿಂಹ, ಕ್ರೈಸ್ಟ್ ವಿಶ್ವವಿದ್ಯಾಲಯದ ಸಂಶೊಧನಾ ಕೇಂದ್ರದ ಹೆಚ್ಚುವರಿ ನಿರ್ದೇಶಕ ಡಾ.ಎಸ್. ಶ್ರೀಕಂಠಸ್ವಾಮಿ ಇತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.