ಯಲಹಂಕ: `ವಿದ್ಯಾರ್ಥಿಗಳು ಕೇವಲ ಪಠ್ಯಕ್ಕಷ್ಟೇ ಪ್ರಾಮುಖ್ಯತೆ ನೀಡದೆ ಕ್ರೀಡಾ ಹಾಗೂ ಸಾಂಸ್ಕೃತಿಕ ರಂಗಗಳಲ್ಲೂ ತೊಡಗಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸಲಹೆ ನೀಡಿದರು.

ಇಲ್ಲಿನ ರೇವಾ ತಾಂತ್ರಿಕ ಮತ್ತು ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ಇ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ರಾಜ್ಯ ಸರ್ಕಾರ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಇತರ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿದ್ದರೂ ಇಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದರಿಂದ ಸಾಕಷ್ಟು ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಬಂದು ಕಲಿಯುತ್ತಿದ್ದಾರೆ~ ಎಂದರು.
ರೇವಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಶ್ಯಾಮರಾಜು ಮಾತನಾಡಿದರು. ಪ್ರಾಂಶುಪಾಲ ಡಾ. ರಾಣಾ ಪ್ರತಾಪರೆಡ್ಡಿ ಸ್ವಾಗತಿಸಿದರು. ಡೀನ್ ಧನಂಜಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.