ವಿದ್ಯಾರ್ಥಿಗಳ ಉನ್ನತ ಸಾಧನೆ: ಎಚ್‌ಎನ್ ಕನಸು

ಬುಧವಾರ, ಜೂಲೈ 17, 2019
28 °C

ವಿದ್ಯಾರ್ಥಿಗಳ ಉನ್ನತ ಸಾಧನೆ: ಎಚ್‌ಎನ್ ಕನಸು

Published:
Updated:

ಗೌರಿಬಿದನೂರು: ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂಬ ಆಶಯ ವ್ಯಕ್ತಪಡಿಸುತ್ತಿದ್ದ ಡಾ.ಎಚ್.ನರಸಿಂಹಯ್ಯ ಅವರ ಕನಸನ್ನು ನನಸು ಮಾಡಬೇಕು. ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದು ಸ್ಥಳಿಯ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ನಾಗರಾಜಪ್ಪ ಅಭಿಪ್ರಾಯಪಟ್ಟರು.ಶಿಕ್ಷಣ ತಜ್ಞ ಡಾ.ಎಚ್. ನರಸಿಂಹಯ್ಯ ಜನ್ಮದಿನದ ಅಂಗವಾಗಿ ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಎಚ್.ಎನ್.ಯುವಕರ ಸಂಘ ಸೋಮವಾರ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಡಾ.ಎಚ್.ನರಸಿಂಹಯ್ಯ ಕೊಡುಗೆ ಅಪಾರ ಎಂದರು.ಪ್ರಬಂಧ ಸ್ಪರ್ಧೆಯಲ್ಲಿ ಒಟ್ಟು 51 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಪ್ರಶಸ್ತಿಗಳನ್ನು ನೀಡಲಾಯಿತು.ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ವೆಂಕಟಸ್ವಾಮಿ, ವೇಣ ಗೋಪಾಲ್, ನಾಗರಾಜರಾವ್ ಉಪ ನ್ಯಾಸಕ ಜೆ.ಜಯರಾಮ್, ಸ್ಪರ್ಧೆಯ ಆಯೋಜಕರಾದ ಸಂತೋಷ, ಓಂಕಾರ್, ಶ್ವೇತಾ ಸುನೀಲ್, ನಾಗರಾಜ್, ಸ್ಪೂರ್ತಿ, ಲೋಕೇಶ್ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry