ಶಿಡ್ಲಘಟ್ಟ: ತಾಲ್ಲೂಕಿನ ದ್ಯಾವಪ್ಪನಗುಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುಗೆ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಂ.ಪಿ.ಜೀವಂಧರ್ಕುಮಾರ್, ವಿದ್ಯಾರ್ಥಿಗಳು ಮಾಡುವ ಸಾಧನೆಯೆ ಶಿಕ್ಷಕರಿಗೆ ಸಿಗುವ ಪ್ರಶಸ್ತಿ ಎಂದು ಹೇಳಿದರು.

ವಿದ್ಯಾರ್ಥಿಗಳಾದ ಸುಧಾಕರ, ವೆಂಕಟೇಶ, ಕೆ.ವಿ.ಕಾವ್ಯ, ಪವಿತ್ರ, ಮನೋಜ ತಮ್ಮ ಶಾಲಾ ಅನುಭವಗಳನ್ನು ಹಂಚಿಕೊಂಡರು. ಶಾಲಾಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರು ಸಿದ್ಧಪಡಿಸಿದ್ದ ಹೋಳಿಗೆ ಊಟವನ್ನು ವಿದ್ಯಾರ್ಥಿಗಳು ಸವಿದರು.
ಬೈರಗಾನಹಳ್ಳಿಯ ವೆಂಕಟರ ಮಣಪ್ಪ, ರಾಮಾಂಜಿನಮ್ಮ, ಶಿಕ್ಷಕರು, ಪೋಷಕರು ಹಾಜರಿದ್ದರು.

ಪ್ರಶಸ್ತಿ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ರಾಜೀವ್ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಿದೆ. ಮಕ್ಕಳ ಅಭಿವೃದ್ಧಿ, ರಕ್ಷಣೆ ಮತ್ತು ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳು ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.