ಬುಧವಾರ, ಏಪ್ರಿಲ್ 14, 2021
30 °C

ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಅಪರಿಚಿತ ವ್ಯಕ್ತಿಯಿಂದ ಹತ್ಯೆಯಾದ ದೆಹಲಿ ವಿವಿ ದ್ವಿತೀಯ ಪದವಿ ವಿದ್ಯಾರ್ಥಿನಿ ರಾಧಿಕಾ ತನ್ವರ್ ಅವರ ನಿವಾಸಕ್ಕೆ ತೆರಳಿದ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಪೋಷಕರಿಗೆ ಸಾಂತ್ವನ ಹೇಳಿ, ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.

ಹತ್ಯೆಯನ್ನು ಖಂಡಿಸಿ ಬುಧವಾರ ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಭಾಗದ ಅವರಣದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಆತ್ಮಾರಾಮ್ ಸನಾತನ ಧರ್ಮ ಕಾಲೇಜಿನ ಬಳಿ ಸೇರಿದ್ದ ವಿದ್ಯಾರ್ಥಿಗಳು ದೆಹಲಿ ಮುಖ್ಯಮಂತ್ರಿ ಮತ್ತು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ವಿಶ್ವವಿದ್ಯಾಲಯ ಅವರಣಗಳಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿದರು.

ಈ ನಡುವೆ ದೆಹಲಿ ಪೊಲೀಸರು ಶಂಕಿತ ಹಂತಕನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.