ಹೈದರಾಬಾದ್ (ಪಿಟಿಐ): ಬಂಧಿತ ಉಸ್ಮಾನಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಾಯಕರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಪರಿಚಿತ ವ್ಯಕ್ತಿಗಳು ಎರಡು ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಪ್ರತಿಭಟನೆ ಹಾಗೂ ಹಿಂಸಾಚಾರ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಸರ್ಕಾರ ಅರೆ ಸೇನಾ ಪಡೆಯ ನೆರವನ್ನು ಕೇಳಿದೆ.
ಹೈದರಾಬಾದ್ ಹೊರವಲಯದ ಉಪ್ಪಲ್ ಸಮೀಪದ ಮೆದಿಪಲ್ಲಿ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ ಅಪರಿಚಿತ ವ್ಯಕ್ತಿಗಳು ಖಾಸಗಿ ಕಾಲೇಜಿನ ಬಸ್‌ಗೆ ಬೆಂಕಿ ಹಚ್ಚಿದ್ದು, ಈ ಸ್ಥಳದಲ್ಲಿ ಚೆರ್ಲಪಲ್ಲಿ ಜೈಲಿನಲ್ಲಿರುವ ಉಸ್ಮಾನಿಯಾ ವಿವಿಯ ಜಂಟಿ ಕ್ರಿಯಾ ಸಮಿತಿಯ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವ ಪತ್ರಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆರ್ಲಿಪಲ್ಲಿ ಜೈಲಿನಲ್ಲಿರುವ ಜೆಎಸಿ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.ಭಾನುವಾರದಿಂದ ಪ್ರಾರಂಭವಾಗುತ್ತಿದ್ದ ಉಸ್ಮಾನಿಯಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.