ಶುಕ್ರವಾರ, ಏಪ್ರಿಲ್ 16, 2021
21 °C

ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕರ್ನಾಟಕ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಮಂಡಳಿ ಈ ಬಾರಿಯೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ (ಮೊದಲ ವರ್ಷದ ಫೇಲ್ ಆದ ವಿಷಯಗಳೊಂದಿಗೆ ಮುಂದಿನ ವರ್ಷಕ್ಕೆ ಮುಂದುವರಿಕೆ) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗುಲ್ಬರ್ಗ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್            ಯುಐ) ಅಧ್ಯಕ್ಷ ಮಹ್ಮದ್ ಕಲೀಂ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಸರ್ಕಾರದ ಹೊಸ ನಿಯಮಾವಳಿಗಳಿಂದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ 5 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಮಂಡಳಿ ಹೊರಡಿಸಿದ ನಿಯಮದಿಂದ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಮುಂದಿನ ಅಭ್ಯಾಸಕ್ಕೆ ಅವಕಾಶ ನೀಡದಿರುವ ಕಾರಣ ತೊಂದರೆ ಅನುಭವಿಸುವಂತಾಗಿದೆ ಎಂದು ವಿವರಿಸಿದ್ದಾರೆ.ಶಿಕ್ಷಣ ಇಲಾಖೆ 2009-10ರಲ್ಲಿ  ಈ ಪದ್ಧತಿ ಜಾರಿಯಲ್ಲಿತ್ತು. 2010-11 ಸಾಲಿನಲ್ಲಿ ಯಾವುದೇ ಆರು ವಿಷಯಗಳು,  2011-12ನೇ ಸಾಲಿನಲ್ಲಿ ಯಾವುದೇ 10 ವಿಷಯಗಳಿಗೆ ಅವಕಾಶ ನೀಡಲಾಗಿತ್ತು. ಪ್ರಸಕ್ತ ವರ್ಷವೂ ವಿದ್ಯಾರ್ಥಿಗಳಿಗೆ ಈ ಪದ್ಧತಿಗೆ ಅವಕಾಶ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.