ಶುಕ್ರವಾರ, ಏಪ್ರಿಲ್ 16, 2021
28 °C

ವಿದ್ಯಾರ್ಥಿಗಳ ಭವಿಷ್ಯಕ್ಕೆ ಫಲಿತಾಂಶವೇ ಬುನಾದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಫಲಿತಾಂಶವೇ ಬುನಾದಿಯಾಗಿದ್ದು, ಆದ್ದರಿಂದ ಪರೀಕ್ಷಾ ಸಮಯದಲ್ಲಿ ಶ್ರಮದಿಂದ ಅಧ್ಯಯನ ಕೈಗೊಂಡು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದರು.ಗುರುಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಜೀವನದ ಅಡಿಪಾಯಕ್ಕೆ ಶಾಲೆಯ ಅಂತಿಮ ಪರೀಕ್ಷೆ ತಿರುವು ನೀಡಲಿದೆ. ಓದು, ಬರಹದ ಜೊತೆಗೆ ನೆನಪಿನ ಶಕ್ತಿಯನ್ನೂ ಕಾಯ್ದುಕೊಳ್ಳಬೇಕು. ಪರಿಕ್ಷಾ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದರು.ತಾಲ್ಲೂಕಿನ 48 ಪ್ರೌಢಶಾಲೆಗಳಿಂದ 3100 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದು, ಈಗಾಗಲೇ ಎಂಟು ಅಭ್ಯಾಸ ಪರೀಕ್ಷೆಗಳು, ಐದು ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಕಾರಹಳ್ಳಿ ಶ್ರಿನಿವಾಸ್ ಮಾತನಾಡಿ, ಕಠಿಣ ಪರಿಶ್ರಮಕ್ಕೆ ಪ್ರತಿಫಲ ಖಚಿತ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಧೈರ್ಯದಿಂದ ಪರೀಕ್ಷೆ ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೊಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸಂಪನ್ಮೂಲ ಅಧಿಕಾರಿ ಶ್ರಿಪಾದರಾವ್ ಮಾತನಾಡಿ, ಫಲಿತಾಂಶದಲ್ಲಿ ಶೈಕ್ಷಣಿಕ ಕ್ರಿಯಾ ಯೋಜನೆಗಳು ಎಷ್ಟು ಮುಖ್ಯವೋ ಅದೇ ರೀತಿ ಪೋಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳ ಶೈಕ್ಷಣಿಕ ವಾತಾವರಣದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು ಎಂದರು.ವೆಂಕಟೇಶ ಮಾತನಾಡಿದರು. ಮಾನಸಿಕ ತಜ್ಞೆ ಡಾ.ಸರಸ್ವತಿ ಹೆಗಡೆ, ಶಿಕ್ಷಕ ಕೆ.ಬಸವರಾಜು, ಸಂಪನ್ಮೂಲ ವ್ಯಕ್ತಿ ಸ್ವಾಮಿ, ತಾಲ್ಲೂಕು ದಸಂಸ ಸಂಚಾಲಕ ತಿಮ್ಮರಾಯಪ್ಪ, ಜಿಲ್ಲಾ ಖಜಾಂಚಿ ಎಚ್.ಕೆ.ವೆಂಕಟೇಶ್, ಆವತಿ ಚಂದ್ರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.