ವಿದ್ಯಾರ್ಥಿಗಳ ವಿಜ್ಞಾನ ಮತ್ತು ಕಲಾ ವಸ್ತುಗಳ ಪ್ರದರ್ಶನ

ಬೆಂಗಳೂರು: ನಿಸರ್ಗ ಗ್ರೂಪ್ ಸಂಸ್ಥೆಗಳ ವತಿಯಿಂದ ನಗರದ ಹೆಗ್ಗನಹಳ್ಳಿಯ ನಿಸರ್ಗ ಶಾಲೆಯಲ್ಲಿ ಬುಧವಾರ ವಿಜ್ಞಾನ ಮತ್ತು ಕಲಾ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ಮತ್ತು ಕಲೆಗೆ ಸಂಬಂಧಿಸಿದ ಮಾದರಿಗಳನ್ನು ಪ್ರದರ್ಶಿಸಲಾಯಿತು. ರಾಕೆಟ್ ಉಡಾವಣೆ, ಮಾನವನ ದೇಹದ ಅಂಗಾಂಗಗಳ ಪ್ರತಿಕೃತಿಗಳು ಗಮನ ಸೆಳೆದವು.
ನಟಿ ಮಮತಾ ರಾವತ್, ‘ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು. ಆ ಮೂಲಕ ಹೆಚ್ಚಿನ ಸಾಧನೆ ಮಾಡಬೇಕು’ ಎಂದರು.
ಆರ್.ಎನ್.ಎಸ್.ಎಜುಕೇಷನಲ್ ಟ್ರಸ್ಟ್ನ ಕಾರ್ಯದರ್ಶಿ ಎಚ್.ಎನ್. ಗಂಗಾಧರ್, ಶಾಲೆಯ ಪ್ರಾಂಶುಪಾಲ ಜಿ.ಸಿ. ಕೇಶವಮೂರ್ತಿ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.