ಸೋಮವಾರ, ಆಗಸ್ಟ್ 26, 2019
20 °C

ವಿದ್ಯಾರ್ಥಿನಿಯರ ಆರೋಗ್ಯ ಕಾಪಾಡಿ

Published:
Updated:

ಸರ್ಕಾರಿ, ಅನುದಾನಿತ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಬಿಸಿಯೂಟದೊಂದಿಗೆ ವಾರಕ್ಕೆ ಮೂರು ದಿನ ಹಾಲು ವಿತರಿಸುವ `ಕ್ಷೀರಭಾಗ್ಯ' ಯೋಜನೆ ಸ್ವಾಗತಾರ್ಹ.ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಾಧ್ಯಮಿಕ ಮತ್ತು ಪ್ರೌಢಶಾಲೆಯ ಹೆಣ್ಣು ಮಕ್ಕಳ ನೆರವಿಗೆ ಬರಬೇಕಾದ ಅನಿವಾರ್ಯ ಇದೆ. ಪ್ರತಿ ತಿಂಗಳು `ಆ ದಿನಗಳು' ಹೆಣ್ಣು ಮಕ್ಕಳು ಅನುಭವಿಸುವ ನೋವು-ಸಂಕಟ ಅನುಭವಿಸಿದವರಿಗೇ ಗೊತ್ತು.ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದವರಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಬದಲಿಗೆ ಬಟ್ಟೆಯನ್ನೇ ಬಳಸುತ್ತಿದ್ದಾರೆ. ಇದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಮಕ್ಕಳ ಆರೋಗ್ಯದ ದೃಷ್ಟಿಯಿಂದಾಗಿ ಸರ್ಕಾರ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡಿ ಅವರಿಗೆ ನೆರವಾಗಬೇಕಾಗಿ ವಿನಂತಿ.

 

Post Comments (+)