ಬುಧವಾರ, ಮೇ 12, 2021
18 °C

ವಿದ್ಯಾರ್ಥಿನಿ ಕೊಲೆ ಪ್ರಕರಣ:ಇಬ್ಬರು ಯುವಕರು ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿ.ಕಾಂ ವಿದ್ಯಾರ್ಥಿನಿ ಮೋನಿಕಾ ರವಿ ಅನ್ಶುಕುಮಾರ್ ಶ್ರೀವಾತ್ಸವ್(19) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ಇಬ್ಬರಲ್ಲಿ ಒಬ್ಬ ಯುವಕನಿಗೆ ಹಲವು ದಿನಗಳಿಂದ ಮೋನಿಕಾ ಅವರ ಪರಿಚಯವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಪೈ ಕಾಲೋನಿಯ ನಿವಾಸಿಯಾದ ಮೋನಿಕಾ ಅವರು ಬುಧವಾರ ರಾತ್ರಿ ಕೊಲೆಯಾಗಿದ್ದರು. ಈಗಾಗಲೇ ಸ್ಥಳೀಯರು ಸೇರಿದಂತೆ, ಮೊನೀಕಾ ಅವರ ಸ್ನೇಹಿತರ ಹಾಗೂ ಸಹಪಾಠಿಗಳ ವಿಚಾರಣೆ ನಡೆಸಲಾಗಿದ್ದು ಶೀಘ್ರವೇ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದರು.`ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಅವರ ಕುಟುಂಬದ ಸದಸ್ಯರಿಗೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಗೆ ತಂಡವನ್ನು ರಚನೆ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ~ ಎಂದು ಪೂರ್ವ ವಿಭಾಗದ ಡಿಸಿಪಿ ಟಿ.ಜಿ.ಕೃಷ್ಣಭಟ್ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.