ವಿದ್ಯಾರ್ಥಿ ಆತ್ಮಹತ್ಯೆ: ಇಂದು ಸತ್ಯಶೋಧನಾ ವರದಿ

ಹೈದರಾಬಾದ್: ಹೈದರಾಬಾದ್ ಸೆಂಟ್ರಲ್ ವಿವಿಯ ದಲಿತ ವಿದ್ಯಾರ್ಥಿ ವೇಮುಲ ರೋಹಿತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೇಮಿಸಿದ್ದ ಸತ್ಯಶೋಧನಾ ಸಮಿತಿ ಇಂದು (ಶುಕ್ರವಾರ) ಅಂತಿಮ ವರದಿ ನೀಡುವ ಸಾಧ್ಯತೆ ಇದೆ.
ಸಚಿವಾಲಯದ ವಿಶೇಷ ಕರ್ತವ್ಯಾಧಿಕಾರಿ ಶಕೀಲಾ ಟಿ. ಶಂಸು ಮತ್ತು ಉಪಕಾರ್ಯದರ್ಶಿ ಸುರತ್ ಸಿಂಗ್ ಅವರನ್ನೊಳಗೊಂಡ ಸಮಿತಿ ಹೈದರಾಬಾದ್ನಿಂದ ವಿವಿ ಕ್ಯಾಂಪಸ್ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಈ ಸಮಿತಿ ವಿವಿಯಿಂದ ಹಿಂತಿರುಗಿದ್ದು, ವರದಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಅಂತಿಮ ವರದಿಯನ್ನು ಸಚಿವೆ ಸ್ಮೃತಿ ಇರಾನಿ ಅವರಿಗೆ ಶುಕ್ರವಾರ ಸಲ್ಲಿಸುವ ನಿರೀಕ್ಷೆ ಇದೆ ಮೂಲಗಳು ಹೇಳಿವೆ.
ಈ ನಡುವೆ ನಿರಂತರ ಒತ್ತಡಕ್ಕೆ ಮಣಿದಿರುವ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ ಗುರುವಾರ ನಾಲ್ವರು ದಲಿತ ವಿದ್ಯಾರ್ಥಿಗಳ ಅಮಾನತು ರದ್ದುಗೊಳಿಸಿತ್ತು.
ರೋಹಿತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ವಾಸ್ತವ ಘಟನೆಗಳನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿರುವ ದಲಿತ ಸಮುದಾಯದ ಪ್ರಾಧ್ಯಾಪಕರು ಆಡಳಿತಾತ್ಮಕ ಹುದ್ದೆಗಳನ್ನು ತ್ಯಜಿಸುವುದಾಗಿ ಬೆದರಿಕೆ ಹಾಕಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.