ಬುಧವಾರ, ಮಾರ್ಚ್ 3, 2021
18 °C

ವಿದ್ಯಾರ್ಥಿ ಆತ್ಮಹತ್ಯೆ: ರಾಹುಲ್ ಇಂದು ಹೈದರಾಬಾದ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದ್ಯಾರ್ಥಿ ಆತ್ಮಹತ್ಯೆ: ರಾಹುಲ್ ಇಂದು ಹೈದರಾಬಾದ್‌ಗೆ

ಹೈದರಾಬಾದ್‌: ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ವೇಮುಲ ರೋಹಿತ್‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಮಂಗಳವಾರ ಬೆಳಿಗ್ಗೆ ಹೈದರಾಬಾದ್‌ಗೆ  ತೆರಳಿದ್ದಾರೆ.

ರೋಹಿತ್‌ ಆತ್ಮಹತ್ಯೆಯ ನಂತರ ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ಮಧ್ಯರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.  ಹಲವು ವಿದ್ಯಾರ್ಥಿ ಸಂಘಟನೆಗಳು  ದೆಹಲಿಯಲ್ಲಿಯೂ ಬೃಹತ್‌ ಪ್ರತಿಭಟನೆ ನಡೆಸಿವೆ. ದೆಹಲಿ, ಹೈದರಾಬಾದ್‌ನಲ್ಲಿ ಮಂಗಳವಾರವೂ ಪ್ರತಿಭಟನೆ ತೀವ್ರಗೊಂಡಿದೆ. ಪುಣೆ ಎಫ್‌ಟಿಐಐ ವಿದ್ಯಾರ್ಥಿಗಳು ಒಂದು ದಿನದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಗಚಿಬೌಲಿ ಪೊಲೀಸರು ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ, ಕುಲಪತಿ ಪ್ರೊ. ಅಪ್ಪಾರಾವ್‌ ಮತ್ತು ಎಬಿವಿಪಿ ಮುಖಂಡ ಸುಶೀಲ್ ಕುಮಾರ್‌ ಮತ್ತು ಬಿಜೆವೈಎಂ ಮುಖಂಡ ವಿಷ್ಣು ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.