ಬೆಂಗಳೂರು: ವಿದ್ಯಾರಣ್ಯಪುರದ ಎಂ.ಎಸ್.ಪಾಳ್ಯದಲ್ಲಿ ಬುಧವಾರ ರಾತ್ರಿ ಸುಧಾಂಶು ಕುಮಾರ್ (21) ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾರ್ಖಂಡ್ನ ಸುಧಾಂಶು, ಹೆಸರುಘಟ್ಟ ರಸ್ತೆ ಯಲ್ಲಿರುವ ಸಂಭ್ರಮ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ನಲ್ಲಿ ಎಂಜಿನಿ ಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಸ್ನೇಹಿತ ರವಿಕುಮಾರ್ ಜತೆ ಎಂ.ಎಸ್. ಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದ ಅವರು, ರಾತ್ರಿ ಮನೆ ಯಲ್ಲೇ ನೇಣು ಹಾಕಿ ಕೊಂಡಿದ್ದಾರೆ.

‘ಬುಧವಾರ ಪರೀಕ್ಷೆ ಬರೆದು ಮನೆಗೆ ಬಂದ ಸುಧಾಂಶು, ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಹೇಳಿದ್ದ. ಬಳಿಕ ಕೋಣೆಗೆ ತೆರಳಿದ ನಾನು, ಶುಕ್ರವಾರದ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ರಾತ್ರಿ 11 ಗಂಟೆಗೆ ನಿದ್ರೆಗೆ ಜಾರಿದ ನಂತರ ಆತ ಕೋಣೆಯ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ ನಡುಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಬೆಳಿಗ್ಗೆ ಎಚ್ಚರ ಗೊಂಡು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಇರಲಿಲ್ಲ.

ಮೊಬೈಲ್ಗೆ ಕರೆ ಮಾಡಿದರೂ ಆತ ಕರೆ ಸ್ವೀಕರಿಸಲಿಲ್ಲ. ಬಳಿಕ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದೆ’ ಎಂದು ರವಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.