ಶನಿವಾರ, ಏಪ್ರಿಲ್ 17, 2021
22 °C

ವಿದ್ಯಾರ್ಥಿ ನಿಲಯ ರದ್ಧತಿ ವಿರುದ್ಧ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಆಶ್ರಮ ಶಾಲೆಗಳ ರದ್ದು, ಸರ್ಕಾರಿ ಹಾಸ್ಟೆಲ್‌ಗಳ ಮುಚ್ಚುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ನಂತರ ಅಲ್ಲಿನ ಸಿಬ್ಬಂದಿಗೆ ಮನವಿಪತ್ರ ಸಲ್ಲಿಸಿದರು.ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪಡೆದ ಸಾಲ ಮನ್ನಾ ಮಾಡಬೇಕು, ಪ್ರತಿ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನಭೂಮಿ ಒದಗಿಸಬೇಕು, ಫಾರಂ 50ರಲ್ಲಿ ಅರ್ಜಿ ಹಾಕಿರುವವರಿಗೆ ಸಾಗುವಳಿ ಹಾಗೂ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.ಹಾಸ್ಟೆಲ್ ಬಯಸಿ ಆರ್ಜಿ ಹಾಕುವ ಎಲ್ಲ ದಲಿತ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು, ಶಾಲಾ, ಕಾಲೇಜುಗಳು ಆರಂಭಗೊಂಡ ದಿನದಿಂದಲೇ ಹಾಸ್ಟೆಲ್‌ಗಳೂ ಪ್ರಾರಂಭವಾಗಬೇಕು ಎಂದು ಒತ್ತಾಯಿಸಿದರು.ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್ ಹುದ್ದೆ, ವಾಟರ್‌ಮ್ಯಾನ್ ಹಾಗೂ ಪೌರ ಸೇವಾ ನೌಕರರನ್ನು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಬೇಕು, ಎಲ್ಲ ಇಲಾಖೆಗಳಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂ ಮಾಡಬೇಕು ಎಂಬುದು ಸೇರಿದಂತೆ 10 ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.ಪದಾಧಿಕಾರಿಗಳಾದ ಕೆಂಪಯ್ಯ ಸಾಗ್ಯ, ರಮಾನಂದ ತರಿಕೆರೆ ಕಾಲೊನಿ, ದೇವರಾಜು ಜಕ್ಕನಹಳ್ಳಿ, ಸಿ.ಕಾಳರಾಜ್ , ಯೋಗೇಶ್, ಸಿದ್ದರಾಜು, ಮಹೇಶ್, ಮುನಿಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.