ತರೀಕೆರೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸೂಕ್ತವಾದ ಕೊಠಡಿಗಳಿಲ್ಲದೆ ಅನಾನುಕೂಲತೆ ಉಂಟಾ ಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಗುರುವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸಿದರು.

ವಿದ್ಯಾರ್ಥಿಗಳು ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ ಮತ್ತು ಕಾಂಗ್ರೆಸ್ ಮುಖಂಡ ಟಿ.ಬಿ.ಶಿವಣ್ಣ ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಭೇಟಿ ಮಾಡಲು ಆಗಮಿಸಿದ ಉಪ ವಿಭಾಗಾಧಿಕಾರಿ ಶಶಿಧರ್ಕುರೇರಾ ಅವರಿಗೆ ಕಾಲೇಜಿನ ನೈಜಸ್ಥಿತಿಯನ್ನು ಶಿವಶಂಕರಪ್ಪ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ವಿವರಿಸಿ, ಸರಿಯಾದ ಕೊಠಡಿ, ಪೀಠೋಪಕರಣ ಮತ್ತು ಕುಡಿಯುವ ನೀರಿನ ವ್ಯವಸ್ಥೆಯಿಲ್ಲದಿರುವುದನ್ನು ಮನವರಿಕೆ ಮಾಡಿಕೊಟ್ಟರು.ಕಾಲೇಜಿಗೆ ಎರಡು ಎಕರೆ ಜಮೀನು ಮಂಜೂರಾಗಿದ್ದು, ಕಟ್ಟಡ ನಿರ್ಮಿ ಸಲು ಹಣ ಬಿಡುಗಡೆಯಾದರೂ ಕಾಮಗಾರಿಯನ್ನು ಏಕೆ ಪ್ರಾರಂಭಿಸಿಲ್ಲವೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪ್ರಶ್ನಿಸಿದರು.

ಸದ್ಯ ಕಾಲೇಜಿಗೆ ತುದಿಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ 4 ಕೊಠಡಿಗಳನ್ನು ಒದಗಿಸಲಾಗಿದ್ದು, ಮತ್ತೆ ಎರಡು ಕೊಠಡಿಯನ್ನು ಬಿಡಿಸಿಕೊಡುವುದಾಗಿ ಉಪ ವಿಭಾಗಾಧಿಕಾರಿಗಳು ತಿಳಿಸಿದರು.

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಘಟಕದ ಪದಾದಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷರೊಂದಿಗೆ ಆಗಮಿಸಿ ಕಾಲೇಜಿನ ವಿದ್ಯಾರ್ಥಿಗಳ ಜತೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೌಕ ರ್ಯಕ್ಕೆ ಒತ್ತಾಯಿಸಿ ಪ್ರತಿಭಟನಾ ಮೆರವಣಿ ಗೆ ನಡೆಸಿ ತಹಶೀಲ್ದಾರ್ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.