ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬುಧವಾರ, ಜೂಲೈ 17, 2019
24 °C

ವಿದ್ಯಾರ್ಥಿ ಸಂಸತ್ ಉದ್ಘಾಟನೆ

Published:
Updated:

ಉಡುಪಿ: ಜನರಿಂದ ಚುನಾಯಿತರಾದ ಜನಪ್ರತಿನಿಧಿಗಳನ್ನು ಯಾರೂ ಕೂಡ ಪ್ರಶ್ನಿಸಬಾರದು ಎಂಬ ಮನಸ್ಥಿತಿ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ನಡೆಯುತ್ತಿದೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.ಮಣಿಪಾಲದ ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರಿ ಅವ್ಯವಸ್ಥೆಗಳ ಬಗ್ಗೆ ಧ್ವನಿ ಎತ್ತುವ ಬದಲು ಜನಪ್ರತಿನಿಧಿಗಳ ಹಗ ರಣಗಳ ಬಗ್ಗೆ ಸರ್ಕಾರ ದಾಳಿ ಮಾಡುವ ಪರಿಸ್ಥಿತಿ ಎದುರಾಗಿದೆ. ಚುನಾ ವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಗೆಲುವಿಗಾಗಿ ವೆಚ್ಚ ಮಾಡುವ ಹಣದಿಂದ ರಾಜಕೀಯ ಭ್ರಷ್ಟವಾಗುತ್ತಿದೆ ಎಂದರು.ವಿದ್ಯಾರ್ಥಿಗಳು, ಯುವಜನತೆ ರಾಜ ಕೀಯ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡು ಯೋಗ್ಯ ವ್ಯಕ್ತಿಗಳನ್ನು ಚುನಾಯಿಸಬೇಕು ಎಂದು ಅವರು ತಿಳಿಸಿದರು.ವಿದ್ಯಾರ್ಥಿ ನಾಯಕರಾದ ಅರವಿಂದ ನಾಯಕ್ ಮತ್ತು ನಿಖಿತಾ ಹೆಬ್ಬಾರ್ ಅವರಿಗೆ ಶಾಲಾ ಪ್ರಾಂಶುಪಾಲರಾದ ಜೆಸ್ಸಿ ಆಂಡ್ರ್ಯೂಸ್ ಪ್ರಮಾಣವಚನ ಭೋದಿಸಿದರುಮಣಿಪಾಲ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಜಿ.ಕೆ.ಪ್ರಭು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕಿ ಶ್ಯಾಮಲಾ ಪ್ರಸಾದ್ ಅತಿಥಿಗಳನ್ನು ಪರಿಚಯಿಸಿದರು. ಉಪಪ್ರಾಂಶು ಪಾಲ ರಾದ ಲೀನಾ ರಾಜನ್ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry