ವಿದ್ಯಾರ್ಥಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹ

7

ವಿದ್ಯಾರ್ಥಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹ

Published:
Updated:

ಬೆಂಗಳೂರು: ನಗರದ ಆಚಾರ್ಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ರಿಚರ್ಡ್ ಲೋಯ್ಟಾಮ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ನಗರದ ಪುರಭವನದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.ಘಟನೆ ನಡೆದು ಒಂದು ತಿಂಗಳು ಕಳೆದರೂ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಆತನ ಸಾವಿಗೆ ಖಚಿತ ಕಾರಣವೇನು ಎಂಬುದು ನಮಗೆ ತಿಳಿಯಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.ರಿಚರ್ಡ್‌ನ ಹತ್ಯೆಯಾಗಿದ್ದರೂ, ರಸ್ತೆ ಅಪಘಾತದಿಂದ ಆತ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಇದನ್ನು ನೋಡಿದರೆ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ರಿಚರ್ಡ್ ಲೋಯ್ಟಾಮ್ ಏ.15 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry