ಮಂಗಳವಾರ, ಅಕ್ಟೋಬರ್ 15, 2019
25 °C

ವಿದ್ಯಾಸಾಗರ್ ಅಧಿಕಾರ ಸ್ವೀಕಾರ

Published:
Updated:

ಬಾಗಲಕೋಟೆ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಈಶ್ವರಚಂದ ವಿದ್ಯಾಸಾಗರ್ ಬುಧವಾರ ಅಧಿಕಾರ ಸ್ವೀಕರಿಸಿದರು.ನವನಗರದ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪ್ರಭಾರಿ ಎಸ್.ಪಿ. ಟ್ರಾಸ್ಗರ್ ಅವರಿಂದ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಪ್ರಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ, ಸಮಾಜದಲ್ಲಿ ತುಳಿತಕ್ಕೆ ಒಳಗಾದ ಮತ್ತು ಬಡವರಿಗೆ ಅನ್ಯಾಯವಾಗದಂತೆ ಎಚ್ಚರವಹಿಸುವುದಾಗಿ ತಿಳಿಸಿದರು.1990ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಈಶ್ವರಚಂದ್ರ ವಿದ್ಯಾಸಾಗರ್ ಅವರು, ಈ ಮೊದಲು ಕೊಪ್ಪಳ ಎಸ್.ಪಿ ಯಾಗಿ ಹಾಗೂ ಲೋಕಾಯುಕ್ತ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ದಕ್ಷತೆಗೆ ಹೆಸರಾಗಿದ್ದಾರೆ.ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಅಭಿಷೇಕ ಗೋಯಲ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗವಾಗಿದ್ದಾರೆ.

Post Comments (+)