ಸೋಮವಾರ, ಮೇ 23, 2022
30 °C

ವಿದ್ಯುತ್ ಅವಘಡ: ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ವಿದ್ಯುತ್ ಸಾರ್ಟ್ ಸರ್ಕ್ಯೂಟ್‌ನಿಂದಾಗಿ ಹೆಂಚಿನ ಮನೆಯೊಂದಕ್ಕೆ ಬೆಂಕಿಬಿದ್ದು ಸುಮಾರು 40 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಪಟ್ಟಣದ ಕುವೆಂಪು ನಗರದ 5ನೇ ಅಡ್ಡರಸ್ತೆಯ ಮಠದಬೀದಿಯಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆ ವೇಳೆಯಲ್ಲಿ ನಡೆದಿದೆ.ಮನೆಯ ವಾಸಿ ಶಾಂತಮ್ಮ ಕೂಲಿ ಕಾರ್ಮಿಕಳಾಗಿದ್ದು ಈಕೆ ಕೂಲಿಗಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.ಮನೆಯಿಂದ ಈಕೆ ಹೊರಗಡೆ ಹೋಗುವಾಗ ವಿದ್ಯುತ್ ಕಡಿತಗೊಂಡಿದ್ದು, ಟಿ.ವಿ. ಸಂಪರ್ಕಕ್ಕೆಂದು ಹಾಕಿದ್ದ ಸ್ವಿಚ್‌ನ್ನು ಹಾಗೆಯೇ ಬಿಟ್ಟು ಹೋಗಿದ್ದಾರೆ. ವಿದ್ಯುತ್ ಬಂದ ನಂತರ ವೈರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.  ಘಟನೆಯಿಂದ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.ಬೆಂಕಿ ಬಿದ್ದ ವಿಷಯ ತಿಳಿದ ಸುತ್ತಮುತ್ತಲ ಸಾರ್ವಜನಿಕರು ಬೆಸ್ಕಾಂ ಕಚೇರಿಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಕಡಿತಗೊಳಿಸಿ, ಬೆಂಕಿ ಆರಿಸಿ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಗರಸಭಾ ಸದಸ್ಯ ಸುನೀಲ್‌ಕುಮಾರ್ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.