ಶುಕ್ರವಾರ, ಜೂನ್ 18, 2021
28 °C

ವಿದ್ಯುತ್ ಕೊರತೆ ನೀಗಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಗಾರಪೇಟೆ: ಮಳೆಯಿಲ್ಲದೆ ಕಾರಣ ವಿದ್ಯುತ್ ಉತ್ಪಾದನೆ ಕಡಿಮೆ ಯಾಗಿದ್ದರೂ, ಗ್ರಾಹಕರಿಗೆ ವಿದ್ಯುತ್ ಕೊರತೆ ಆಗದಂತೆ ಬೆಸ್ಕಾಂ ಕಾರ್ಯ ನಿರ್ವಹಿಸುತ್ತಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮೀನಾರಾಯಣ ಹೇಳಿದರು.ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಬುಧವಾರ ನಡೆದ ಗ್ರಾಹಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ವಿದ್ಯುತ್ ಕಡಿತ ಉಂಟು ಮಾಡಲಾಗುತ್ತಿದೆ. ಕುಡಿಯುವ ನೀರಿನ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.ದೇವರಗುಟ್ಟಹಳ್ಳಿ ಗ್ರಾಮದಲ್ಲಿ ಉಂಟಾಗಿರುವ ಐಪಿ ಸೆಟ್‌ಗಳಿಗೆ ವಿದ್ಯುತ್ ಒದಗಿಸುವ ಬಗ್ಗೆ, ಕದರಿಪುರದಲ್ಲಿನ ಸಮಸ್ಯೆ, ನಕ್ಕನಹಳ್ಳಿ ರೈತರ ತೊಂದರೆ ಸಮಸ್ಯೆ ಬಗ್ಗೆ ಸಭೆಯಲ್ಲಿ ಪರಿಹಾರವನ್ನು ಒದಗಿಸಲಾಯಿತು. ಪಟ್ಟಣದ ಅಮರಾವತಿನಗರದಲ್ಲಿ ಶಿಥಿಲವಾಗಿರುವ ವಿದ್ಯುತ್ ಕಂಬವನ್ನು ಕೂಡಲೇ ಬದಲಾಯಿಸಲು ಸೂಚನೆ ನೀಡಲಾಯಿತು.ಅಧಿಕಾರಿಗಳಾದ ಸೈಯದ್ ಹುಸೇನಿ, ಲಿಂಗರಾಜು, ಕೋತಲರಾಮ, ರೇಖ ಮತ್ತು ಪ್ರವೀಣ ಈ ಸಂದರ್ಭದಲ್ಲಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.