ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

7

ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

Published:
Updated:

ಚಿಕ್ಕಬಳ್ಳಾಪುರ: ಸಮರ್ಪಕ ವಿದ್ಯುತ್ ಪೂರೈಕೆ, ಅಕ್ರಮ-ಸಕ್ರಮ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಸೋಮವಾರ ನಗರದ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.



ನಗರದ ಪ್ರವಾಸಿ ಮಂದಿರದಿಂದ ಬೆಸ್ಕಾಂ ಕಚೇರಿವರೆಗೆ ಮರವಣಿಗೆ ನಡೆಸಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದು, ಇದರ ನಿವಾರಣೆಗೆ ಬೆಸ್ಕಾಂ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



ಸಂಘಟನೆ ಮುಖಂಡ ಚನ್ನರಾಯಪ್ಪ ಮಾತನಾಡಿ, ಮೂಲಸೌಕರ್ಯ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಿದರೆ ಜೀವನ ಮಾಡುವುದಾದರೂ ಹೇಗೆ? ಕೃಷಿ ಚಟುವಟಿಕೆ ಇಲ್ಲದೆ, ಬೆಳಕೂ ಇಲ್ಲದೆ ಸಂಕಷ್ಟದಲ್ಲೆ ಬದುಕುವ ಪರಿಸ್ಥಿತಿಯಿದೆ. ಭರವಸೆಗಳು ನೀಡುವ ಬದಲು ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.



ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ. ವಿದ್ಯುತ್ ಸಮರ್ಪಕವಾಗಿ ಪೂರೈಸಲು ವಿಫಲವಾಗಿರುವ ಬಿಜೆಪಿ ಈ ಕೂಡಲೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದರು. ಸಂಘಟನೆ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ, ಕೃಷ್ಣ, ಶ್ರೀನಿವಾಸ್, ಜಿ.ವಿ.ಕೆಂಪಣ್ಣ, ವೆಂಕಟೇಶ್ ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry