ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆ
ಬೆಂಗಳೂರು: ರಾಜಧಾನಿಯಲ್ಲಿ ವಿದ್ಯುತ್ ಪೂರೈಕೆ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ಶೆಡ್ಡಿಂಗ್ ಮುಂದುವರಿದಿದ್ದು, ಪದೇ ಪದೇ ವಿದ್ಯುತ್ ಕಡಿತ ಆಗುತ್ತಿದೆ.
ಶನಿವಾರ ನಗರದ ಹಲವೆಡೆ ಲೋಡ್ಶೆಡ್ಡಿಂಗ್ ಇರಲಿಲ್ಲ. ಆದರೆ ಕೆಲ ಬಡಾವಣೆಗಳಲ್ಲಿ 2-3 ಗಂಟೆ ವಿದ್ಯುತ್ ಕಡಿತ ಮಾಡಲಾಗಿತ್ತು. ವಿದ್ಯುತ್ ಖರೀದಿ ಮಾಡುತ್ತಿರುವುದರಿಂ ಹಾಗೂ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 7ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಗಿರುವುದರಿಂದ ಪೂರೈಕೆಯಲ್ಲಿ ಸುಧಾರಣೆಯಾಗಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.