ಚೆನ್ನೈ, (ಐಎಎನ್ಎಸ್): ಕೂಡುಂಕುಳಂ ಪರಮಾಣು ವಿದ್ಯುತ್ ಘಟಕದಲ್ಲಿ (ಕೆಎನ್ಪಿಪಿ) ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕೇಂದ್ರ ಪರಿಶೀಲಿಸುತ್ತಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ವಿ.ನಾರಾಯಣಸ್ವಾಮಿ ಶುಕ್ರವಾರ ಹೇಳಿದ್ದಾರೆ.

ತಮಿಳುನಾಡಿನ ಬೇಡಿಕೆ ವಿಷಯವನ್ನು ಈಗಾಗಲೇ ಪ್ರಧಾನಿ ಅವರ ಗಮನಕ್ಕೆ ತರಲಾಗಿದ್ದು, ಈ ಕುರಿತಂತೆ ಶೀಘ್ರವೇ ಅವರೊಂದಿಗೆ ಚರ್ಚಿಸುವುದಾಗಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ನನಗೆ ರಾಜ್ಯದಲ್ಲಿನ ವಿದ್ಯುತ್ ಕೊರತೆ ಸಮಸ್ಯೆಯ ಅರಿವಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು ಮಾಡಿರುವ ಮನವಿಯನ್ನು ಪರಿಗಣಿಸುವಂತೆ ಪ್ರಧಾನಿ ಅವರಲ್ಲಿ ಕೋರುವುದಾಗಿ ಅವರು ಹೇಳಿದರು.

ಕೂಡುಂಕುಂಳಂ ಪರಮಾಣು ವಿದ್ಯುತ್ ಸ್ಥಾವರದಿಂದ ಉತ್ಪಾದನೆಯಾಗುವ ಪೂರ್ಣ ವಿದ್ಯುತ್ನ್ನು ರಾಜ್ಯಕ್ಕೆ ನೀಡುವಂತೆ ಕೇಳಿ ಮುಖ್ಯಮಂತ್ರಿ ಜಯಲಲಿತಾ ಅವರು ಇತ್ತೀಚೆಗೆ ಪ್ರಧಾನಿ ಅವರಿಗೆ ಪತ್ರವೊಂದನ್ನು ಬರೆದು ಮನವಿ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.