ವಿದ್ಯುತ್: ಬೇಡಿಕೆ ಈಡೇರಿಕೆ ಕಷ್ಟ

7

ವಿದ್ಯುತ್: ಬೇಡಿಕೆ ಈಡೇರಿಕೆ ಕಷ್ಟ

Published:
Updated:

ಬೆಂಗಳೂರು: `ವಿದ್ಯುತ್ ಬೇಡಿಕೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಹಾಗಾಗಿ ಶೇಕಡ 10ರಷ್ಟು ಹೆಚ್ಚು ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೂ ಬೇಡಿಕೆಯನ್ನು ಸಂಪೂರ್ಣವಾಗಿ ಈಡೇರಿಸುವುದು ಕಷ್ಟವಾಗುತ್ತಿದೆ~ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಪಿ. ಮಣಿವಣ್ಣನ್ ತಿಳಿಸಿದರು.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಿದ್ದ `ಗ್ರಾಹಕರಿಗೆ ಸಂಬಂಧಿಸಿದ ವಿದ್ಯುತ್ ಕಾನೂನುಗಳು~ ಎಂಬ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

`ಗ್ರಾಹಕರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಹೆಚ್ಚು ಏರ್ಪಡಿಸಿ. ಸಂವಾದ-ಚರ್ಚೆಗಳ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸಿ~ ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.`ಸಂಸ್ಥೆ ಅನುಭವಿಸುತ್ತಿರುವ ನಷ್ಟದಲ್ಲಿ ವಿದ್ಯುತ್ ಸೋರಿಕೆಯ ಪಾಲು ಶೇ 25ರಷ್ಟಿದೆ. ಇದನ್ನು ಸೂಕ್ತವಾಗಿ ನಿರ್ವಹಿಸಲು ಸ್ಮಾರ್ಟ್ ಮೀಟರ್‌ಗಳು ಸಹಾಯ ಮಾಡುತ್ತವೆ. ಸ್ಮಾರ್ಟ್ ಮೀಟರ್‌ಗಳ ಅಳವಡಿಕೆ ಪ್ರಕ್ರಿಯೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕಿದೆ~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry