ಗುರುವಾರ , ಮೇ 13, 2021
19 °C

ವಿದ್ಯುತ್ ವ್ಯತ್ಯಯ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಅನಿಮಿಯತ ವಿದ್ಯುತ್ ನಿಲುಗಡೆಯನ್ನು ವಿರೋಧಿಸಿ ಇಲ್ಲಿನ ಪವರ್‌ಲೂಮ್ಸ ನೇಕಾರರ ಸಂಘ, ಯೂತ್ ಸಿಲ್ಕ್ ರೀಲರ್ಸ್‌ ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘಗಳು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಹಗಲಿನ ವೇಳೆ ಕೇವಲ 3 ಗಂಟೆಯೂ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ ಸಹ ವಿದ್ಯುತ್ ನೀಡಲು ಮಂಡಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.ಇನ್ನು ಮುಂದೆ ಸರಿಯಾಗಿ ವಿದ್ಯುತ್ ನೀಡದಿದ್ದರೆ ವಿಜಯಪುರ ಬಂದ್‌ಗೆ ಕರೆನೀಡಲಾಗುವುದು. ಎಂದು ಎಚ್ಚರಿಸಿದರು. ಗ್ರಾಮಾಂತರ ಪ್ರದೇಶದಲ್ಲಿ 4 ಫೀಡರ್‌ಗಳಿಗೆ ಕನಿಷ್ಟ ಒಂದು ಗಂಟೆಯಷ್ಟು ಕಾಲವಾದರೂ ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ವಿದ್ಯುತ್ ಇಲ್ಲದೆ ಗ್ರಾಮೀಣ ಜನರ ಬದುಕು ದುಸ್ತರವಾಗಿದೆ ಎಂದು ಅಳಲು ತೋಡಿಕೊಂಡರು.ಸಮಜಾಯಿಶಿ: ವಿಜಯಪುರ ಪಟ್ಟಣಕ್ಕೆ ಸುಮಾರು 12 ಮೆಗಾವ್ಯಾಟ್ ವಿದ್ಯುತ್‌ನ ಅಗತ್ಯವಿದೆ. ಕಳೆದ ಕೆಲವು ದಿನಗಳಿಂದ ಕೇವಲ 2 ಮೆಗಾವ್ಯಾಟ್‌ನಷ್ಟು ಮಾತ್ರ ವಿದ್ಯುತ್ ಪೂರೈಕೆಯಾಗುತ್ತಿದೆ. ಈಗಾಗಲೇ ಸಮಸ್ಯೆ ಕುರಿತು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ಸರಬರಾಜು ಸರಿಹೋಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಶೇಷ ಉಪನ್ಯಾಸ

ವಿಜಯಪುರ: ರೋಟರಿ ಸಂಸ್ಥೆ ಹಮ್ಮಿಕೊಂಡಿರುವ ನವ ಪೀಳಿಗೆ ಮಾಸಾಚರಣೆಯ ಅಂಗವಾಗಿ ಮಂಗಳವಾರ ಇಲ್ಲಿನ ರೋಟರಿ ಶಾಲೆಯ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ವನ್ನು ಹಮ್ಮಿಕೊಳ್ಳಲಾಗಿದೆ.ಸಂಜೆ 7ಗಂಟೆಗೆ ವಾಣಿಜ್ಯೋದ್ಯಮಿ ವಿ.ರವೀಂದ್ರ ಅವರು ಉಪನ್ಯಾಸ ನೀಡಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.