ಮಂಗಳವಾರ, ಮೇ 24, 2022
30 °C

ವಿದ್ಯುತ್ ಸಮಸ್ಯೆಗೆ ಆಡಳಿತ ವೈಫಲ್ಯ ಕಾರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ಅಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಸಿದಂತೆ ಸೋಮವಾರ ಕಾತರಕಿ ಭಾಗದ ರೈತರು ಶಾಸಕ ಜಿ.ಹಂಪಯ್ಯ ನಾಯಕ ಹಾಗೂ ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ನೇತೃತ್ವದಲ್ಲಿ ಕೆಪಿಟಿಸಿಎಲ್ ಹಾಗೂ ಜೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

 

ಈ ಸಂದರ್ಭದಲ್ಲಿ ಕಾತರಕಿ, ಮದ್ಲಾಪುರ,ಚೀಕಲಪರ್ವಿ, ದದ್ದಲ ಭಾಗದ ರೈತರ ಅನುಕೂಲಕ್ಕಾಗಿ ಕಾತರಕಿ ಹತ್ತಿರದ ವಿದ್ಯುತ್ ವಿತರಣಾ ಕೇಂದ್ರದಿಂದ  ಎರಡು ಫೀಡರ್‌ಗಳಿಗೆ ಪ್ರತಿದಿನ ತಲಾ ನಾಲ್ಕು ತಾಸು ವಿದ್ಯುತ್ ಪೂರೈಕೆಗೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್.ಬೋಸರಾಜು, ವಿದ್ಯುತ್ ಸಮಸ್ಯೆಯಿಂದ ಜಿಲ್ಲೆಯ ಜನತೆ, ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.ಶಾಸಕ ಜಿ.ಹಂಪಯ್ಯ ನಾಯಕ, ಆರ್.ತಿಮ್ಮಯ್ಯ ಶೆಟ್ಟಿ, ಹನುಮೇಶ ಮದ್ಲಾಪುರ, ರಾಜಾ ವಸಂತ ನಾಯಕ, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ನಾಯಕ, ಅಧ್ಯಕ್ಷ ಅಯ್ಯನಗೌಡ ಜಂಬಲದಿನ್ನಿ, ಮಹಾಂತೇಶಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.