ಶುಕ್ರವಾರ, ಮೇ 7, 2021
19 °C

ವಿದ್ಯುತ್ ಸಮಸ್ಯೆ: ಅಧಿಕಾರಿಗಳಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದ್ಯುತ್ ಸಮಸ್ಯೆ: ಅಧಿಕಾರಿಗಳಿಗೆ ದೂರು

ಅಂಕೋಲಾ: ತಾಲ್ಲೂಕಿನ ಅಚವೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಸ್ಥಗಿತಗೊಂಡಿದ್ದು, ಜನರು ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ. ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯವನ್ನು ಕಾಂಗ್ರೆಸ್ ಮುಖಂಡರು ಖಂಡಿದಿದ್ದಾರೆ.ಹೆಸ್ಕಾಂ ಕಚೇರಿಗೆ ಬುಧವಾರ ತೆರಳಿದ್ದ ಕಾಂಗ್ರೆಸ್ ಮುಖಂಡರು ಹಿರಿಯ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದರು. ಜಿ.ಪಂ. ಮಾಜಿ ಸದಸ್ಯ ಜಿ.ಎಂ. ಶೆಟ್ಟಿ ಮಾತನಾಡಿ, ಅಚವೆ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಯ ಮೇಲೆ ಗಿಡ- ಮರದ ಟೊಂಗೆಗಳು ಬಿದ್ದಿದ್ದು, ತೆರವುಗೊಳಿಸಿ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದರು.ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ನಾಯ್ಕ, ಕೆಪಿಸಿಸಿ ಸದಸ್ಯ ರಮಾನಂದ ನಾಯಕ, ಜಿ.ಪಂ. ಮಾಜಿ ಉಪಾಧ್ಯಕ್ಷ ಉದಯ ಡಿ. ನಾಯ್ಕ ಜಿ.ಪಂ. ಸದಸ್ಯ ವಿನೋದ ನಾಯಕ, ಜಿ.ಪಂ. ಮಾಜಿ ಸದಸ್ಯೆ ಶಾಂತಿ ಆಗೇರ, ಪ್ರಮುಖರಾದ ಸುಜಾತಾ ಗಾಂವಕರ್, ಶಂಷಾದ್‌ದ ಶೇಖ, ಪ.ಪಂ. ಮಾಜಿ ಸದಸ್ಯ ಅಜಿತ ನಾಯ್ಕ, ಬೊಬ್ರವಾಡಾ ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀಕಾಂತ ನಾಯ್ಕ, ಮೋನಪ್ಪ ನಾಯ್ಕ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಕೆ. ರಮೇಶ ಮಾತನಾಡಿ ಸಿಬ್ಬಂದಿ ಕೊರತೆಯಿಂದಾಗಿ ಕೆಲಸ ವಿಳಂಬವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಸಮಸ್ಯೆ ನಿವಾರಿಸಿ, ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.