ವಿದ್ಯುತ್: 14ರಂದು ಸರ್ವಪಕ್ಷ ಸಭೆ

7

ವಿದ್ಯುತ್: 14ರಂದು ಸರ್ವಪಕ್ಷ ಸಭೆ

Published:
Updated:

ಹುಬ್ಬಳ್ಳಿ: `ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಉತ್ತರ ಕಂಡುಕೊಳ್ಳುವುದಕ್ಕಾಗಿ ಚರ್ಚೆ ನಡೆಸಲು ಕೇಂದ್ರ ಸರ್ಕಾರದೊಂದಿಗೆ ಇದೇ 14ರಂದು ಸರ್ವಪಕ್ಷ ಸಭೆ ನಡೆಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.ಸೋಮವಾರ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆಗೆ ತೆರಳುವ ಮುನ್ನ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.`ವಿದ್ಯುತ್ ಸಮಸ್ಯೆ ಕಾಡುತ್ತಿರುವುದು ನಿಜ. ಹಾಗೆಂದು ನಾವು ಕೇಂದ್ರದ ಕಡೆಗೆ, ಕೇಂದ್ರದವರು ನಮ್ಮ ಕಡೆಗೆ ಬೆರಳು ತೋರಿಸುವುದು ಸರಿಯಲ್ಲ. ಸಮಸ್ಯೆ ಪರಿಹಾರಕ್ಕೆ ಎರಡೂ ಕಡೆಯವರು ಕುಳಿತು ಮಾತನಾಡಬೇಕಾಗಿದೆ~ ಎಂದು ಅವರು ಹೇಳಿದರು.ಬರ ಪ್ರದೇಶ ಘೋಷಣೆಗೆ ಸಂಬಂಧಿಸಿ ಇದೇ 13ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿಗಳು~ ಹೋಬಳಿ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವ ಕುರಿತು ಚರ್ಚಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry