ಮಂಗಳವಾರ, ನವೆಂಬರ್ 19, 2019
22 °C

ವಿಧಾನಸಭಾ ಚುನಾವಣೆ ಮುಂದೂಡಿಕೆ ಕೋರಿದ ಅರ್ಜಿ ವಜಾ

Published:
Updated:

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 5ರಂದು ನಡೆಯಲಿರುವ ಚುನಾವಣೆಯನ್ನು ಮೇ 26ಕ್ಕೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಎಸ್.ಎಚ್. ಭಾಸ್ಕರ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿದೆ.ಮೇ 5 ಬೇಸಿಗೆಯ ರಜೆಯ ಅವಧಿಯಲ್ಲಿ ಬರುತ್ತದೆ. ಈ ಸಂದರ್ಭದಲ್ಲಿ, ಪಾಲಕರು ತಮ್ಮ ಮಕ್ಕಳನ್ನು ಪರ ಊರುಗಳಿಗೆ ಕರೆದುಕೊಂಡು ಹೋಗಿರುತ್ತಾರೆ. ಅವರಿಗೆ ಮತದಾನ ಮಾಡಲು ಕಷ್ಟ.ಅಲ್ಲದೆ, ರಾಜಕೀಯ ಪಕ್ಷಗಳಿಗೆ ಇದುವರೆಗೂ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿತ್ತು. `ಇಂಥ ವಿಚಾರಗಳ ಕುರಿತು ಸಮಯ ವ್ಯರ್ಥ ಮಾಡಲಾಗದು' ಎಂದು ನ್ಯಾಯಪೀಠ, ಅರ್ಜಿ ವಜಾಗೊಳಿಸಿತು.

ಪ್ರತಿಕ್ರಿಯಿಸಿ (+)