ಗುರುವಾರ , ಜೂನ್ 17, 2021
26 °C

ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ: 4ನೇ ಅಭ್ಯರ್ಥಿ ಯಾರು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ತೆರೆಮರೆ ಕಸರತ್ತು ಮುಂದುವರಿದಿದೆ.ಕಳೆದ ಬಾರಿಯಂತೆ ಈ ಸಲವೂ ರಾಜೀವ್ ಚಂದ್ರಶೇಖರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿ- ಜೆಡಿಎಸ್ ಬೆಂಬಲದಿಂದ ಆಯ್ಕೆಯಾಗಲು ಸಿದ್ಧತೆ ನಡೆಸಿದ್ದು, ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.26 ಸದಸ್ಯ ಬಲವನ್ನು ಹೊಂದಿರುವ ಜೆಡಿಎಸ್ ಯಾರಿಗೆ ಬೆಂಬಲ ನೀಡಲಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದರೆ ಉನ್ನತ ಮೂಲಗಳ ಪ್ರಕಾರ ರಾಜೀವ್ ಅವರನ್ನು ಬೆಂಬಲಿಸುವ ಸಾಧ್ಯತೆಗಳಿದ್ದು, ಸೋಮವಾರ ಬೆಳಿಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ನಿಲುವು ಪ್ರಕಟಿಸಲಿದ್ದಾರೆ.ದೇವೇಗೌಡ ಅವರೊಂದಿಗೆ ನಂಟು ಹೊಂದಿರುವ ಉದ್ಯಮಿ ಆದಿಕೇಶವುಲು 4ನೇ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದಾರೆ. ಆದರೆ ಅವರಿಗೆ ಬಿಜೆಪಿ ಬೆಂಬಲ ಸಿಗುತ್ತದೊ, ಇಲ್ಲವೊ ಎಂಬುದು ಇನ್ನೂ ಖಚಿತವಾಗಿಲ್ಲ. ಒಂದು ವೇಳೆ ಬಿಜೆಪಿ ಬೆಂಬಲ ನೀಡಿದರೆ ಅವರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಹೆಚ್ಚುವರಿ ಮತಗಳನ್ನು ಕಾಂಗ್ರೆಸ್ಸೇತರ ಅಭ್ಯರ್ಥಿಗೆ ನೀಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಪ್ರಕಟಿಸಿದ್ದಾರೆ. ಆದರೆ ಈ ಅಭ್ಯರ್ಥಿ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ.ಇಂದು ಪ್ರಕಟ: ನಿವೃತ್ತ ಐಎಎಸ್ ಅಧಿಕಾರಿ ಆರ್.ರಾಮಕೃಷ್ಣ ಬಿಜೆಪಿ ಮೊದಲನೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಅವರ ಹೆಸರನ್ನು ಪಕ್ಷದ ಹೈಕಮಾಂಡ್ ಈಗಾಗಲೇ ಅಂತಿಮಗೊಳಿಸಿದೆ.2ನೇ ಅಭ್ಯರ್ಥಿ ಸ್ಥಾನಕ್ಕೆ ರಾಜ್ಯಸಭೆ ಹಾಲಿ ಸದಸ್ಯ ಕೆ.ಬಿ.ಶಾಣಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಹೆಸರು ಪರಿಶೀಲನೆಯಲ್ಲಿದೆ. ಇಬ್ಬರಲ್ಲಿ ಒಬ್ಬರ ಹೆಸರನ್ನು ಸೋಮವಾರ ಪ್ರಕಟಿಸಲಾಗುತ್ತದೆಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.