ಶುಕ್ರವಾರ, ನವೆಂಬರ್ 15, 2019
21 °C

ವಿಧಾನಸೌಧ ಚಲೋಗೆ ರೇಷ್ಮೆ ಕೃಷಿಕರು

Published:
Updated:

ಚಿಕ್ಕಬಳ್ಳಾಪುರ: ರೇಷ್ಮೆ ಉದ್ಯಮದ ರಕ್ಷಣೆಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಕರೆ ನೀಡಲಾಗಿರುವ ವಿಧಾನಸೌಧ ಚಲೋಗೆ ಬೆಂಬಲ ವ್ಯಕ್ತಪಡಿಸಿ ಜಿಲ್ಲೆಯ ರೇಷ್ಮೆ ಕೃಷಿಕರು ಮಂಗಳವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.ಶಿಡ್ಲಘಟ್ಟ, ಚಿಂತಾಮಣಿ ತಾಲ್ಲೂಕು ರೇಷ್ಮೆ ಕೃಷಿಕರು ವಿಜಯಪುರದ ಮಾರ್ಗವಾಗಿ ಪ್ರಯಾಣ ಬೆಳೆಸಿದರೆ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ತಾಲ್ಲೂಕು ರೇಷ್ಮೆ ಕೃಷಿಕರು ದೇವನಹಳ್ಳಿ ಮಾರ್ಗವಾಗಿ ಪ್ರಯಾಣ ಬೆಳೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೇಷ್ಮೆ ಕೃಷಿಕರು, `ಕುಸಿದಿರುವ ರೇಷ್ಮೆಗೂಡಿನ ಬೆಲೆಯನ್ನು ಸ್ಥಿರಗೊಳಿಸುವುದು, ರೇಷ್ಮೆ ಆಮದು ಸುಂಕವನ್ನು ಶೇ 31ಕ್ಕೆ ಏರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಸುಂಕರಹಿತ ರೇಷ್ಮೆ ಆಮದು ವಿರೋಧಿ ನೀತಿ ಅಖಿಲ ಭಾರತ ಹೋರಾಟ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ, ಜಿಲ್ಲಾ ರೇಷ್ಮೆಕೃಷಿ ಹಿತರಕ್ಷಣಾ ವೇದಿಕೆ ವತಿಯಿಂದ ಜಂಟಿಯಾಗಿ ಕರೆ ನೀಡಿವೆ. ಇದರ ಹಿನ್ನೆಲೆಯಲ್ಲಿ ನಾವೆಲ್ಲರೂ ಅಪಾರ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದೇವೆ~ ಎಂದರು.

 

ಪ್ರತಿಕ್ರಿಯಿಸಿ (+)