ಶುಕ್ರವಾರ, ಏಪ್ರಿಲ್ 3, 2020
19 °C

ವಿಫಲ ಬಾವಿ ಸಾಲ ಮನ್ನಾ ಯೋಜನೆ ವಿಸ್ತರಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣಸೌಧ (ಬೆಳಗಾವಿ): ವಿಫಲ ಬಾವಿಗಳ ಬಾಬ್ತು ರೈತರು ಪಡೆದ ಸಾಲವನ್ನು ಮನ್ನಾ ಮಾಡುವ ಯೋಜ ನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವ ಎಚ್‌.ಎಸ್. ಮಹ ದೇವಪ್ರಸಾದ್‌, ‘ವಿಫಲ ಬಾವಿಗಳ ಸಾಲ ಮನ್ನಾ ಮಾಡುವ ಯೋಜನೆ ವಿಸ್ತರಿ ಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಕ್ಯಾಸ್ಕಾರ್ಡ್‌) ಬ್ಯಾಂಕ್‌ ಮತ್ತು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾ ಭಿವೃದ್ಧಿ ಸಹಕಾರಿ (ಪಿಕಾರ್ಡ್‌) ಬ್ಯಾಂಕ್‌ಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದಾರೆ ಎಂದರು.ವಿಫಲ ಬಾವಿಗಳನ್ನು ತೋಡಲು ರೈತರು ಪಡೆದಿರುವ ಸಾಲದ ಕುರಿತು ವಿವರವಾದ ವರದಿಗಳನ್ನು ಸಲ್ಲಿಸುವಂತೆ ಕ್ಯಾಸ್ಕಾರ್ಡ್ ಮತ್ತು ಪಿಕಾರ್ಡ್‌ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಮಹದೇವಪ್ರಸಾದ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)