ವಿಮಾನ ಇಳಿಸಿದರೂ ಬದುಕದ ಕಂದಮ್ಮ
ಮುಂಬೈ (ಪಿಟಿಐ): ಏಳು ತಿಂಗಳ ಮಗು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರಿಂದ 150 ಪ್ರಯಾಣಿಕರಿದ್ದ ಇಂಡಿಗೊ ವಿಮಾನ ಇಲ್ಲಿನ ನಿಲ್ದಾಣದಲ್ಲಿ ಭಾನುವಾರ ತುರ್ತು ಭೂಸ್ಪರ್ಶ ಮಾಡಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗು ಮೃತಪಟ್ಟಿದೆ ಎಂದು ನಿಲ್ದಾಣದಲ್ಲಿ ಮಗುವಿನ ಆರೋಗ್ಯ ತಪಾಸಣೆ ಮಾಡಿದ ಬಳಿಕ ವೈದ್ಯರು ಘೋಷಿಸಿದರು.
ಹೃದಯದಲ್ಲಿ ಏಳು ರಂಧ್ರಗಳಿದ್ದ ಕಾರಣ ಮಗುವಿನ ಶಸ್ತ್ರಚಿಕಿತ್ಸೆಗೆ ವಿಮಾನದಲ್ಲಿ ಚೆನ್ನೈಗೆ ಕರೆದುಕೊಂಡು ಹೋಗುತ್ತಿದ್ದರು ಎಂದು ಇಂಡಿಗೊ ಏರ್ಲೈನ್ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.