ವಿಮಾನ ದರ ಏರಿಕೆ

7

ವಿಮಾನ ದರ ಏರಿಕೆ

Published:
Updated:

ನವದೆಹಲಿ (ಪಿಟಿಐ):  ದೀಪಾವಳಿ ಸಂದರ್ಭದಲ್ಲಿ ವಿಮಾನ ಪ್ರಯಾಣ ದರಗಳಲ್ಲಿ ಭಾರಿ ಏರಿಕೆಯಾಗಲಿದ್ದು, ಈ ಸಂದರ್ಭದಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುವವರ ಜೇಬಿಗೆ ಕತ್ತರಿ ಬೀಳಲಿದೆ.

ವಿಮಾನ ಪ್ರಯಾಣ ದರವು ಸಾಮಾನ್ಯ ದರಕ್ಕಿಂತ ಎರಡರಿಂದ ಮೂರು ಪಟ್ಟು ಹೆಚ್ಚಳವಾಗಲಿದೆ. ಅದರಲ್ಲೂ ಮುಖ್ಯವಾಗಿ ಪೂರ್ವ ವಲಯದಲ್ಲಿ ಈ ಹೆಚ್ಚಳ ಕಂಡು ಬರಲಿದೆ.

ದೇಶೀಯ ವಿಮಾನಯಾನ ಸಂಸ್ಥೆಗಳು ಹೆಚ್ಚಿನ ಪ್ರಯಾಣ ದರ ನಿಗದಿಪಡಿಸಿರುವುದರಿಂದ ರಜಾ ಕಾಲ ಸವಿಯಲು ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಜನರು ವಿಮಾನ ಪ್ರಯಾಣಕ್ಕೆ ಹೆಚ್ಚು ದುಡ್ಡು ತೆರಬೇಕಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry