ಬೆಂಗಳೂರು: ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಡಲು ವಿಮಾನಯಾನ ಸಚಿವ ಅಜಿತ್ ಸಿಂಗ್ ಸಮ್ಮತಿ ಸೂಚಿಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಶೀಘ್ರವೇ ಮಂಡಿಸಲಾಗುವುದು ಎಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.

`ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಬೇಕು ಎಂಬುದು ರಾಜ್ಯದ ಬಹುಜನರ ಅಪೇಕ್ಷೆಯಾಗಿತ್ತು. ಈ ವಿಚಾರವನ್ನು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದೆ.

ಇದಕ್ಕೆ ಸ್ಪಂದಿಸಿದ ಪ್ರಧಾನ ಮಂತ್ರಿಗಳು, ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಕೆಂಪೇಗೌಡರ ಹೆಸರಿಡಲು ಸಚಿವಾಲಯದ ಸಮ್ಮತಿ ದೊರೆತಿದೆ~ ಎಂದು ಕೃಷ್ಣ ಹೇಳಿದ್ದಾರೆ.
ಈ ಕುರಿತ ಪ್ರಸ್ತಾವನೆ ಕೇಂದ್ರ ಸಚಿವ ಸಂಪುಟದ ಮುಂದೆ ಬಂದಾಗ, ಅದಕ್ಕೆ ಅನುಮತಿ ದೊರಕಿಸಲು ಸರ್ವ ಪ್ರಯತ್ನ ನಡೆಸುವುದಾಗಿ ಅವರು ಹೇಳಿದ್ದಾರೆ.

ಸಿಎಂ ವಿಶ್ವಾಸ: `ಕೆಂಪೇಗೌಡರ ಹೆಸರು ಇಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದಲೂ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ~ ಎಂದು ಸಿ.ಎಂ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.