ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕ ಹೆಚ್ಚಳ: ಭಾರತಕ್ಕೆ ಚಾಟಿ ಏಟು

7

ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕ ಹೆಚ್ಚಳ: ಭಾರತಕ್ಕೆ ಚಾಟಿ ಏಟು

Published:
Updated:
ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕ ಹೆಚ್ಚಳ: ಭಾರತಕ್ಕೆ ಚಾಟಿ ಏಟು

ಬೀಜಿಂಗ್ (ಪಿಟಿಐ): ದೆಹಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಶುಲ್ಕವನ್ನು ಏಕಾಏಕಿ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಭಾರತ ಸರ್ಕಾರದ ನಿರ್ಧಾರವನ್ನು ಅಂತರರಾಷ್ಟ್ರೀಯ ವಿಮಾನ ಸಾರಿಗೆ ಸಂಸ್ಥೆ (ಐಎಟಿಎ) ಸೋಮವಾರ ಬಲವಾಗಿ ಖಂಡಿಸಿದೆ. ಭಾರತದಲ್ಲಿ ಮಂದಗತಿಯಲ್ಲಿ ಸಾಗಿರುವ ಹೊಸ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಮತ್ತು ಮೂಲಸೌಕರ್ಯ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆಯೂ ಅದು  ಕಿಡಿ ಕಾರಿದೆ.ದೇಶದ ಒಟ್ಟಾರೆ ಆರ್ಥಿಕ ಬೆಳವಣಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಾಗರಿಕ ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಪ್ರೋತ್ಸಾಹಿಸಬೇಕು. ಆದರೆ, ಭಾರತ ಸರ್ಕಾರದ ನೀತಿ ಇದಕ್ಕೆ ವ್ಯತಿರಿಕ್ತವಾಗಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕವನ್ನು ದಕ್ಷಿಣ ಆಫ್ರಿಕಾ ಶೇ161 ರಷ್ಟು ಹೆಚ್ಚಿಸಿದೆ. ಆದರೆ, ದೆಹಲಿ ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕವನ್ನು ಶೇ 346ರಷ್ಟು ಹೆಚ್ಚಿಸಲಾಗಿದೆ. ಈ ತೀರ್ಮಾನಕ್ಕೆ ಸಮ್ಮತಿ ಸೂಚಿಸಿರುವ ಭಾರತೀಯ ವಿಮಾನ ನಿಲ್ದಾಣ ನಿಯಂತ್ರಣ ಸಂಸ್ಥೆಯ(ಎಇಆರ್‌ಎ) ನಿರ್ಧಾರ ಆಶ್ಚರ್ಯಕರ ಮತ್ತು ಖಂಡನೀಯ ಎಂದು ಅದು ಹೇಳಿದೆ.ಸೋಮವಾರ  ಇಲ್ಲಿ ನಡೆದ ಐಎಟಿಎ ವಾರ್ಷಿಕ ಮಹಾಧಿವೇಶನದಲ್ಲಿ ಸಂಸ್ಥೆಯ ಮಹಾ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಟೋನಿ ಟೈಲರ್ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವಿಮಾನಯಾನ ಕ್ಷೇತ್ರ ಮತ್ತು ಪ್ರಯಾಣಿಕರ ಹಿತಾಸಕ್ತಿ ದೃಷ್ಟಿಯಿಂದ ಶೀಘ್ರದಲ್ಲಿಯೇ ಭಾರತೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.ಐಎಟಿಎ ನಿಗದಿ ಪಡಿಸಿದ ನಿಯಮಾವಳಿ ಅಡಿಯಲ್ಲಿಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಮಾನ ನಿಲ್ದಾಣ ಅಭಿವೃದ್ಧಿ ಶುಲ್ಕವನ್ನು ಹೆಚ್ಚಿಸಿವೆ. ಇದಕ್ಕೆ ತಮ್ಮ ಆಕ್ಷೇಪವಿಲ್ಲ. ಆದರೆ, ಈ ನಿರ್ಧಾರ ಕೈಗೊಳ್ಳುವ ಮುನ್ನ ಕನಿಷ್ಠ ಪಕ್ಷ ಪ್ರಯಾಣಿಕರ ಹಿತವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕಿತ್ತು. ಶುಲ್ಕ ಹೆಚ್ಚಳದಿಂದ ದೆಹಲಿ ವಿಮಾನ ನಿಲ್ದಾಣ ಪ್ರಪಂಚದ ಅತ್ಯಂತ `ದುಬಾರಿ ನಿಲ್ದಾಣ~ ಎಂಬ ಕುಖ್ಯಾತಿಗೆ ಒಳಗಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry