ಸೊರಬ: ತಾಲ್ಲೂಕಿನ ಆನವಟ್ಟಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕಸ ವಿಲೇವಾರಿಯಾಗದೆ ಗ್ರಾಮದ ನೈರ್ಮಲ್ಯ ಸಂಪೂರ್ಣ ಹದಗೆಟ್ಟಿದ್ದು, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದ್ದರೂ ಗ್ರಾಮ ಪಂಚಾಯ್ತಿ ಆಡಳಿತ ಕಣ್ಣು ಮುಚ್ಚಿ ಕುಳಿತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆನವಟ್ಟಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಆದಾಯವಿರುವ ಪಂಚಾಯ್ತಿ, ಪ್ರತಿ ವರ್ಷ ಗಾಮ ಪಂಚಾಯ್ತಿ ಸಂತೆ ಮಾರುಕಟ್ಟೆ ಶುಲ್ಕ ಹಾಗೂ ಮಳಿಗೆಗಳಿಂದ ರೂ 36 ಲಕ್ಷಕ್ಕಿಂತಲೂ ಅಧಿಕ ಆದಾಯವಿದೆ. ಬಸ್ನಿಲ್ದಾಣದಿಂದ ಪ್ರತಿ ವರ್ಷ 18 ಲಕ್ಷಕ್ಕಿಂತಲೂ ಹೆಚ್ಚು ಆದಾಯವಿದ್ದರೂ, ಬಸ್ನಿಲ್ದಾಣ ಆವರಣದಲ್ಲಿ ತಿಂಗಳುಗಟ್ಟಲೇ ಕಸ ವಿಲೇವಾರಿಯಾಗದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಗ್ರಾಮ ಪಂಚಾಯ್ತಿ ಸದಸ್ಯ ಜೆ. ಚಂದ್ರಶೇಖರಪ್ಪ `ಪ್ರಜಾವಾಣಿ'ಯೊಂದಿಗೆ ಮಾತನಾಡಿ, ಕಳೆದ ಆರು ತಿಂಗಳ ಹಿಂದೆ ನಡೆದ ಸಾಮಾನ್ಯ ಸಭೆಯಲ್ಲಿ ಕಸ ವಿಲೇವಾರಿಗಾಗಿ ಟೆಂಡರ್ ಕರೆ ಯುವಂತೆ ಅಧಿಕಾರಿಗಳಿಗೆ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೌಖಿಕವಾಗಿ ಈ ಬಗ್ಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಗ್ರಾಮದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮದ ಜನತೆ ಡೆಂಗೆ ಜ್ವರಕ್ಕೆ ಬಲಿಯಾಗುವ ಭೀತಿಯಲ್ಲಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯ್ತಿ ಎದುರು ಧರಣಿ ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿದರು.

ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ಆರೋಪಕ್ಕೆ ಸ್ಪಷ್ಟನೆ ನೀಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗಿರಿಜಮ್ಮ ಹಾಗೂ ಅಭಿವೃದ್ಧಿ ಅಧಿಕಾರಿ ನೀಲಪ್ಪ ಭೂತಣ್ಣನವರ್, ಕಸವಿಲೇವಾರಿ ಟೆಂಡರ್ ಅವಧಿ ಮುಗಿದುದ್ದು, ನೂತನ ಟೆಂಡರ್ ಕರೆಯಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲೇ ಕಸ ವಿಲೇವಾರಿ ಮಾಡಿಸಲಾಗುವುದು ಎಂದು ತಿಳಿಸಿದರು.

ಆನವಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹರ್ಷ ಪಾಟೀಲ್ ಮಾಹಿತಿ ನೀಡಿ, ಡೆಂಗೆ ಹಾಗೂ ಇಲಿ ಜ್ವರಗಳ ಶಂಕೆ ಇರುವ 10 ಜನರ ರಕ್ತದ ಮಾದರಿಯನ್ನು ಪರೀಕ್ಷೆ ಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಕಳಹಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ತೊಟ್ಟಿ ಶುದ್ಧತೆ ಬಗ್ಗೆ ದೂರುಗಳು ಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯ್ತಿಗೆ ತಿಳಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.