ಭಾನುವಾರ, ಮೇ 9, 2021
27 °C

ವಿಳಂಬಕ್ಕೆ ರಾಜಕೀಯ ಹಸ್ತಕ್ಷೇಪ ಕಾರಣ

ಎಸ್.ಎಸ್.ಖನಗಾವಿ,ನಿವೃತ್ತ ಮುಖ್ಯ ಎಂಜಿನಿಯರ್ Updated:

ಅಕ್ಷರ ಗಾತ್ರ : | |

ನೀರಾವರಿ ಯೋಜನೆಗಳ ಅನುಷ್ಠಾನ ವಿಳಂಬವಾಗಲು ನೀರಾವರಿ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸಮನ್ವಯದ ಕೊರತೆಯೇ ಪ್ರಮುಖ ಕಾರಣ. ವಿಳಂಬಕ್ಕೆ ತಾಂತ್ರಿಕ ಕಾರಣಗಳು ಸೇರಿದಂತೆ ರಾಜಕೀಯ ಹಸ್ತಕ್ಷೇಪ ಕೂಡ ಕಾರಣ. ನೀರಾವರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇಲಾಖೆಯಲ್ಲಿ ಭೂಸ್ವಾಧೀನ ವಿಶೇಷಾಧಿಕಾರಿ ಹುದ್ದೆಗಳು ಖಾಲಿ ಇವೆ.ಅರಣ್ಯ ಇಲಾಖೆಯಿಂದ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆ ನಾಲ್ಕೈದು ವರ್ಷ ತೆಗೆದುಕೊಳ್ಳುತ್ತದೆ. ಭೂಮಿ ಹಸ್ತಾಂತರಕ್ಕಿರುವ ಅಡೆತಡೆಗಳನ್ನು ನಿವಾರಿಸಬೇಕು.  ಏತ ನೀರಾವರಿ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ವಿಳಂಬ ಮಾಡಬಾರದು.ಅರಣ್ಯ ಪ್ರದೇಶದಲ್ಲಿ ಬರುವ ನೀರಾವರಿ ಯೋಜನೆಗಳಿಗೆ ಪರಿಸರ ಸಚಿವಾಲಯದಿಂದ ತಕ್ಷಣವೇ ಒಪ್ಪಿಗೆ ದೊರೆಯುವಂತಾಗಬೇಕು. ಮಹಾರಾಷ್ಟ್ರದಲ್ಲಿ ನಿರ್ಮಾಣ ಮಾಡಿರುವಂತೆ ಇಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಅಣೆಕಟ್ಟೆಗಳನ್ನು ನಿರ್ಮಿಸಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.