ಗುರುವಾರ , ಏಪ್ರಿಲ್ 22, 2021
29 °C

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಸಿಐಡಿ ತನಿಖೆಗೆ - ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಬಸವನ ಬಾಗೇವಾಡಿ ತಾಲ್ಲೂಕು ಗಣಿ ಪುನರ್ವಸತಿ ಕೇಂದ್ರದಲ್ಲಿ ಶಿವಮ್ಮ (ಶಿವಬಾಯಿ) ಪೂಜಾರ ಎಂಬ ದಲಿತ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.`ಈ ಪ್ರಕರಣ ಕುರಿತು ಸಚಿವ ರಾಜೂಗೌಡ, ವಾಲ್ಮೀಕಿ ಗುರುಪೀಠದ ಸ್ವಾಮೀಜಿ ನನ್ನೊಂದಿಗೆ ಚರ್ಚಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಪ್ರಕರಣ ದಾಖಲಿಸಿಕೊಳ್ಳುವಲ್ಲಿ ವಿಳಂಬ ಮಾಡಿದ್ದರಿಂದ ಹಿಡಿದು ಯಾವ್ಯಾವ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಯಲಿದೆ' ಎಂದು ಪ್ರತಿಕ್ರಿಯಿಸಿದರು.ಈ ಮಹಿಳೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ರೂ 1.20 ಲಕ್ಷ ನೆರವು ನೀಡಲಾಗುವುದು. ಈಗ ಮೊದಲ ಕಂತಿನಲ್ಲಿ ರೂ 60,000 ನೀಡಲಾಗಿದೆ ಎಂದರು.`ಈ ಪ್ರಕರಣದಲ್ಲಿ ನನ್ನ ಕೈವಾಡ ಇಲ್ಲ. ನಾನು ಆರೋಪಿಗಳ ರಕ್ಷಣೆ ಮಾಡುತ್ತಿಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯ ಭೇಟಿಗೆ ಗ್ರಾಮಕ್ಕೆ ತೆರಳಿದ್ದೆ. ಆ ಮಹಿಳೆ ಗ್ರಾಮದಲ್ಲಿ ಇರದ ಕಾರಣ ಆಕೆಯ ಭೇಟಿ ಸಾಧ್ಯವಾಗಿಲ್ಲ' ಎಂದು ಈ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.