ನವದೆಹಲಿ (ಪಿಟಿಐ): ದೇವಯಾನಿ ಪ್ರಕರಣ ಕುರಿತಂತೆ ಅಮೆರಿಕದ ವಿದೇಶಾಂಗ ಇಲಾಖೆಯ ರಾಜಕೀಯ ವ್ಯವಹಾರಗಳ ಅಧೀನ ಕಾರ್ಯದರ್ಶಿ ವೆಂಡಿ ಶೆರ್ಮನ್ ಅವರು ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರೊಂದಿಗೆ ಗುರುವಾರ 40 ನಿಮಿಷ ದೂರವಾಣಿಯಲ್ಲಿ ಚರ್ಚಿಸಿ ವಿವಾದ ತಿಳಿಗೊಳಿಸುವ ಯತ್ನ ನಡೆಸಿದರು.

ಆದರೆ, ಈ ಪ್ರಕರಣ ಈಗಾಗಲೇ ಅಮೆರಿಕದ ನ್ಯಾಯಾಲಯದ ಎದುರಿರುವ ಕಾರಣ ಪ್ರಕರಣವನ್ನು ಕೈಬಿಡುವ ಭಾರತದ ಬೇಡಿಕೆ ಈಡೇರುವುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನ್ಯೂಯಾರ್ಕ್ ಫೆಡರಲ್ ನ್ಯಾಯಾಲಯದ ಅಟಾರ್ನಿ ಆಗಿರುವ ಭಾರತ ಮೂಲದ ಪ್ರೀತ್ ಬರಾರ ಈ ಪ್ರಕರಣದ ಕುರಿತು ಕಠಿಣ ನಿಲುವು ತಳೆದಿರುವುದೂ ಕಗ್ಗಂಟಾಗಲಿದೆ.

‘ಭಾರತದ ನ್ಯಾಯಾಂಗ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಪ್ರೀತ್ ತಮ್ಮ ವ್ಯಾಪ್ತಿಯನ್ನು ಮೀರಿ ವರ್ತಿಸುತ್ತಿದ್ದಾರೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅವರು ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರುಗೇಟು ನೀಡಿದೆ.

ಒಪ್ಪಂದದ ಉಲ್ಲಂಘನೆ: ಆರೋಪಿ ಸಂಗೀತಾ ರಿಚರ್ಡ್ಸ್ ಪತಿ ಮತ್ತು ಮಕ್ಕಳನ್ನು ತರಾತುರಿಯಲ್ಲಿ ಭಾರತದಿಂದ ತಮ್ಮ ದೇಶಕ್ಕೆ ಕರೆಸಿಕೊಳ್ಳುವ ಮೂಲಕ ಅಮೆರಿಕದ ಅಧಿಕಾರಿಗಳು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಆರೋಪಿಸಿದ್ದಾರೆ. ಅಮೆರಿಕ, ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.