ವಿವಿಗೆ ಬಸ್‌ ಸೇವೆ ಕಡಿತ: ವಿದ್ಯಾರ್ಥಿಗಳ ಪ್ರತಿಭಟನೆ

7

ವಿವಿಗೆ ಬಸ್‌ ಸೇವೆ ಕಡಿತ: ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಗೆ ವಿವಿ ಬಸ್‌ಗಳ ಸಂಖ್ಯೆ ಕಡಿತ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷೆ ಅಶ್ವಿನಿ ಕೆ.ಎಸ್‌. ಮಾತನಾಡಿ, ‘ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಕ್ಕೆ 18 ಬಸ್‌ಗಳು ಸಂಚರಿಸುತ್ತಿದ್ದವು. ನಷ್ಟದ ಕಾರಣ ನೀಡಿ ಏಳು ಬಸ್‌ಗಳ ಸೇವೆಯನ್ನು ಇತ್ತೀಚೆಗೆ ರದ್ದುಗೊಳಿಸಲಾಗಿತ್ತು. ಇದರಿಂದ ನಿತ್ಯ ಸಂಚರಿಸುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ದೂರಿದರು.ಮನವಿ ಸ್ವೀಕರಿಸಿದ ಕುಲಪತಿ ಪ್ರೊ.ಬಿ.ತಿಮ್ಮೇಗೌಡ, ‘ಈ ಬಸ್‌ಗಳಿಂದ ವಿವಿಗೆ ಭಾರಿ ನಷ್ಟವಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಪಾವತಿಸಿದರೆ ಸೇವೆ ಒದಗಿಸಲು ಸಿದ್ಧ. ಈ ಬಗ್ಗೆ ಸರ್ಕಾರದ ಜೊತೆಗೆ ಸಮಾಲೋಚನೆ ನಡೆಸಲಾಗುವುದು’ ಎಂದು ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry