ವಿವಿಧೆಡೆ ಇಂದುನೀರು ಪೂರೈಕೆಯಲ್ಲಿ ವ್ಯತ್ಯಯ

ಬುಧವಾರ, ಮೇ 22, 2019
32 °C

ವಿವಿಧೆಡೆ ಇಂದುನೀರು ಪೂರೈಕೆಯಲ್ಲಿ ವ್ಯತ್ಯಯ

Published:
Updated:

ಬೆಂಗಳೂರು: ಹಾರೋಹಳ್ಳಿಯ ಕಾವೇರಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಕಂಡಕ್ಟರ್‌ನಲ್ಲಿ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆಗಳಲ್ಲಿ ಶನಿವಾರ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ನಗರದ ನೈರುತ್ಯ ಭಾಗದ ಜಾನ್ಸನ್ ಮಾರುಕಟ್ಟೆ, ಅಲಸೂರು, ಆಸ್ಟಿನ್‌ಟೌನ್, ನೀಲಸಂದ್ರ, ಆನೆಪಾಳ್ಯ, ದೊಮ್ಮಲೂರು, ಆಡುಗೋಡಿ, ಕೋರಮಂಗಲ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.`ಕಂಡಕ್ಟರ್‌ನಲ್ಲಿ ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ದೋಷ ಕಾಣಿಸಿಕೊಂಡಿತ್ತು. ಕೆಪಿಟಿಸಿಎಲ್ ಅಧಿಕಾರಿಗಳು ರಾತ್ರಿ 9 ಗಂಟೆಯ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಿದ್ದಾರೆ.ಒಂದನೇ ಹಂತದ ಯೋಜನೆಯ ದುರಸ್ತಿ ಕಾರ್ಯಕ್ಕೆ ಅಧಿಕ ಸಮಯ ಹಿಡಿದಿದೆ. ಉಳಿದ ಯೋಜನೆಗಳ ದುರಸ್ತಿ ಕಾರ್ಯಗಳು ಅರ್ಧ ಗಂಟೆಯಲ್ಲೇ ಪೂರ್ಣಗೊಂಡಿವೆ.ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಶನಿವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಈ ವ್ಯತ್ಯಯ ಅರ್ಧ ಗಂಟೆಯಿಂದ ಒಂದು ಗಂಟೆ ವರೆಗೆ ಇರಲಿದೆ~ ಎಂದು ಜಲಮಂಡಳಿಯ ಮುಖ್ಯ ಎಂಜಿನಿಯರ್ ಟಿ.ವೆಂಕಟರಾಜು `ಪ್ರಜಾವಾಣಿ~ಗೆ ಶುಕ್ರವಾರ ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry