ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿ ಮಹಿಳೆ ಸೇರಿದಂತೆ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಪತಿಯ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ರಾಮಚಂದ್ರ ಎಂಬುವರ ಪತ್ನಿ ಸುನೀತಾ (21) ಆತ್ಮಹತ್ಯೆ ಮಾಡಿಕೊಂಡವರು.

ಖಾಸಗಿ ಕಂಪೆನಿಯಲ್ಲಿ ಮಾರಾಟ ಪ್ರತಿನಿಧಿಯಾಗಿರುವ ರಾಮಚಂದ್ರ ಅವರು ಕೆಲಸದ ಒತ್ತಡದಿಂದಾಗಿ ಸರಿಯಾಗಿ ಮನೆಗೆ ಬರುತ್ತಿರಲಿಲ್ಲ. ಈ ವಿಷಯವಾಗಿ ಅವರ ಜತೆ ಜಗಳವಾಡುತ್ತಿದ್ದ ಸುನೀತಾ, ಬೇರೆಡೆ ಕೆಲಸಕ್ಕೆ ಸೇರುವಂತೆ ಪತಿಗೆ ಒತ್ತಾಯಿಸುತ್ತಿದ್ದರು. ಆದರೆ ರಾಮಚಂದ್ರ ಅವರು ಬೇರೆ ಕೆಲಸಕ್ಕೆ ಸೇರಲು ನಿರಾಕರಿಸಿದ್ದರು. ಇದರಿಂದ ಮನನೊಂದ ಅವರು ಪತಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಾಗಡಿ ರಸ್ತೆ ಠಾಣೆಯಲ್ಲಿ ದೂರು ದಾಖಲಾಗಿದೆ.

ತಿಲಕ್ನಗರ: ಕೇಬಲ್ ಆಪರೇಟರ್ ಆಗಿದ್ದ ವಿನಯ್ (23) ಎಂಬ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಯನಗರದಲ್ಲಿ ನಡೆದಿದೆ. ಮೂಲತಃ ಮಂಗಳೂರಿನವನಾದ ಆತ ಜಯನಗರದಲ್ಲಿ ಸ್ನೇಹಿತರ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಗ್ರಾಹಕರಿಂದ ಸಂಗ್ರಹಿಸಿದ ಕೇಬಲ್ ಶುಲ್ಕವನ್ನು ಆತ ಮಾಲೀಕರಿಗೆ ನೀಡದೆ ದುರುಪಯೋಗಪಡಿಸಿಕೊಂಡಿದ್ದ. ಇದರಿಂದ ಆತಂಕಗೊಂಡು ಆತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಲಕ್ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಕಾಮಾಕ್ಷಿಪಾಳ್ಯ: ಸಾಕಷ್ಟು ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾಕ್ಷಿಪಾಳ್ಯ ಸಮೀಪದ ಕಾವೇರಿಪುರದಲ್ಲಿ ನಡೆದಿದೆ.ಕಾವೇರಿಪುರ ನಿವಾಸಿ ಉಮೇಶ್ (39) ಆತ್ಮಹತ್ಯೆ ಮಾಡಿಕೊಂಡವರು. ಬಾರ್ವೊಂದರ ಬಳಿ ಕಬಾಬ್ ಅಂಗಡಿ ಇಟ್ಟುಕೊಂಡಿದ್ದ ಅವರು ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಬೇಸರಗೊಂಡಿದ್ದ ಅವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಕೊಲೇಔಟ್: ಬಿಟಿಎಂ ಲೇಔಟ್ ಎರಡನೇ ಹಂತದ ನಿವಾಸಿ ಜಗದೀಶ್ (42) ಎಂಬುವರು ಮದ್ಯದ ಅಮಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೈಕೊ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ವಿವಾಹಿತರಾದ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮೈಕೊಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.