ಭಾನುವಾರ, ಮೇ 16, 2021
28 °C

ವಿವಿಧೆಡೆ ಪರಿಸರ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ನಗರ ಹಾಗೂ ಜಿಲ್ಲೆಯ ವಿವಿಧೆಡೆ ಬುಧವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ತಿನೈಘಾಟ್‌ನಿಂದ ಹೊಸಪೇಟೆ ವರೆಗಿನ ರೈಲು ಮಾರ್ಗವನ್ನು ಜೋಡಿ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿಯನು ಕೈಗೆತ್ತಿಕೊಂಡಿರುವ ಆರ್‌ವಿಎನ್‌ಎಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.ನಗರದ ರೈಲ್ವೆ ನಿಲ್ದಾಣದ ಪಕ್ಕ ರೈಲ್ವೆ ಕ್ರಾಸಿಂಗ್ ನಂ. 62ರ ಬಳಿ ಇರುವ ಸಂಸ್ಥೆಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಸಿಗಳನ್ನು ನೆಟ್ಟರು.ಆರ್‌ವಿಎನ್‌ಎಲ್‌ನ ಯೋಜನಾ ನಿರ್ದೇಶಕ ಎ.ಜಿ.ಪಾಟೀಲ, ವಯಂಟ್ಸ್ ಸೊಲೂಷನ್ಸ್‌ನ ಯೋಜನಾ ವ್ಯವಸ್ಥಾಪಕ ಬಿಆರ್‌ಕೆ ಶರ್ಮಾ, ಎಲ್ ಆ್ಯಂಡ್ ಟಿ ಕಂಪೆನಿಯ ಯೋಜನಾ ವ್ಯವಸ್ಥಾಪಕ ಎಂ.ಎ.ಸಾದಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಂಗವಾಗಿ ದಿವಟರ ನಗರ, ಬಿ.ಟಿ.ಪಾಟೀಲ ನಗರದಲ್ಲಿರುವ ಉದ್ಯಾನವನಗಳು, ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.ಪೌರಾಯುಕ್ತೆ ಬಿ.ಎಂ.ಅಶ್ವಿನಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಆನಂದ, ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಆರ್.ಪಾಟೀಲ, ವ್ಯವಸ್ಥಾಪಕ ಬಾಬು, ಕಿರಿಯ ಎಂಜಿನಿಯರ್ ಎಸ್.ಬಿ. ಮರಿಗೌಡ್ರು, ಹಿರಿಯ ಆರೋಗ್ಯ ನಿರೀಕ್ಷಕಿ ಜಯಶೀಲ, ಮಂಜುಳಾಬಾಯಿ, ಎನ್.ಎಚ್.ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.ಹಿರೇಬಿಡನಾಳ: ಯಲಬುರ್ಗಾ ತಾಲ್ಲೂಕಿನ ಹಿರೇಬಿಡನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನವನ್ನು  ಆಚರಿಸಲಾಯಿತು.ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತಲ್ಲದೇ, ಪರಿಸರ ಸಂರಕ್ಷಣೆಯ ಮಹತ್ವ ಕುರಿತಂತೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಶಿಕ್ಷಕರಾದ ರಾಜು ತೇರದಾಳ, ಫಾಲಾಕ್ಷಾಚಾರ್ಯ ಬಡಿಗೇರ, ಶೋಭಾ ರಾಜೂರು ಉಪಸ್ಥಿತರಿದ್ದರು.ಪ್ರಭಾರ ಮುಖ್ಯ ಶಿಕ್ಷಕ ವಿದ್ಯಾಸಾಗರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಅಂಜನಾದೇವಿ ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕ ಸಿದ್ಲಿಂಗಸ್ವಾಮಿ ನಿರೂಪಿಸಿದರು. ಮಹಿಪತಿ ಕಟ್ಟಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.