ಗುರುವಾರ , ಜೂನ್ 24, 2021
24 °C

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಘಟ್ಟಪುರ: ಕೆಲವು ನ್ಯಾಯ ಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂಥವರಿಂದ ಪಡಿತರ ಚೀಟಿಗಳನ್ನು ವಶಪಡಿಸಿಕೊಂಡು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಬೈಯನಪಾಳ್ಯದಲ್ಲಿ ಬಿಬಿಎಂಪಿ ಮತ್ತು ಬಿಡಿಎ ವತಿಯಿಂದ ಸುಮಾರು ರೂ 25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಯಶವಂತಪುರ ಕ್ಷೇತ್ರದಲ್ಲಿ ಮೂರೂವರೆ ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಕುಡಿಯುವ ನೀರು ಹಾಗೂ ರಸ್ತೆ- ಒಳಚರಂಡಿ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದರು. ಸ್ಥಳೀಯ ಪಾಲಿಕೆ ಸದಸ್ಯೆ ವೀಣಾ ನಾಗರಾಜು, ವಾರ್ಡ್‌ನಲ್ಲಿ 12 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆ ಬಂದಾಗ ವೃಷಭಾವತಿ ನದಿ ಉಕ್ಕಿ ಹರಿದು ಕೆಂಗೇರಿ, ಮೈಲಸಂದ್ರ ಮುಂತಾದ ಬಡಾವಣೆಗಳಿಗೆ ನೀರು ನುಗ್ಗಿ ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಯಲು ತಡೆಗೊಡೆ ನಿರ್ಮಿಸುವುದಕ್ಕೆ 7 ಕೋಟಿ ರೂಪಾಯಿ ಮಂಜೂರಾಗಿದೆ ಎಂದರು.ತಾ.ಪಂ.ಮಾಜಿ ಅಧ್ಯಕ್ಷ ಎಚ್. ನಾಗರಾಜು, ಪಾಲಿಕೆ ಜಂಟಿ ಆಯುಕ್ತ ಕೆ.ಎಂ.ರಾಮಚಂದ್ರನ್, ಜಿ.ಪಂ.ಸದಸ್ಯ ಎ.ಶಿವಕುಮಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಭೂ ಮಂಜೂರಾತಿ ಸಮಿತಿ ಅಧ್ಯಕ್ಷ ವೆಂಕಟಪ್ಪ ಇತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.