ಮಂಗಳವಾರ, ಜನವರಿ 28, 2020
19 °C

ವಿವಿಧ ಇಲಾಖೆ ಸಮನ್ವಯಕ್ಕೆ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರದಲ್ಲಿನ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ನಾ­ಯಕ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅದು ತಿಂಗಳಿಗೊಮ್ಮೆ ಸಭೆ ಸೇರಲಿದೆ ಎಂದು ಎಂದು ವಿಧಾನ­ಸಭೆಯ ದೂರುಗಳ ಸಮಿತಿ ಅಧ್ಯಕ್ಷರೂ ಆದ ಉಪಸಭಾಧ್ಯಕ್ಷ ಎನ್‌.ಎಚ್‌.ಶಿವ­ಶಂಕರ­ರೆಡ್ಡಿ ಶುಕ್ರವಾರ ಇಲ್ಲಿ ತಿಳಿಸಿದರು.ನಗರದಲ್ಲಿನ ಸಂಚಾರ ದಟ್ಟಣೆ, ಕುಡಿಯುವ ನೀರು, ಒಳಚರಂಡಿ, ರಸ್ತೆ ಅವ್ಯವಸ್ಥೆ ಇತ್ಯಾದಿ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ವಿಪರೀತ ದೂರು­ಗಳು ಬರುತ್ತಿದ್ದು, ಆ ಹಿನ್ನೆಲೆಯಲ್ಲಿ ರೆಡ್ಡಿ ಅವರು ಬಿಬಿಎಂಪಿ, ಬಿಡಿಎ, ಜಲಮಂಡಲಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಮುಖ್ಯಸ್ಥರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಹಾಜರಿದ್ದರು.ಬೆಂಗಳೂರು ಬೃಹದಾಕಾರವಾಗಿ ಬೆಳೆದ ಹಾಗೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ಅವುಗಳನ್ನು ನಿಭಾ­ಯಿಸಲು ಸಮನ್ವಯದ ಕೊರತೆ ಇರು­ವುದು ಸ್ಪಷ್ಟವಾಗಿದ್ದು, ಕಾಲಕಾಲಕ್ಕೆ ಸಭೆಗಳನ್ನು ನಡೆಸುವ ಮೂಲಕ ಜನಸ್ನೇಹಿ­ ಆಡಳಿತ ನೀಡಬೇಕು ಎಂದರು.ಪ್ರತಿ ತಿಂಗಳು ಪಟ್ನಾಯಕ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಈ ಸಭೆಗಳಲ್ಲಿ ಸಮನ್ವಯದ ಕೊರತೆ ನೀಗಿಸುವ ಬಗ್ಗೆ ಚರ್ಚೆಯಾಗಲಿದೆ. ಯಾವ ಸಂಸ್ಥೆ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳು­ತ್ತಿದೆ? ಅದಕ್ಕೆ ಇತರ ಸಂಸ್ಥೆಗಳ ಸಹಕಾರ ಬೇಕೇ ಇತ್ಯಾದಿ ವಿಷಯಗಳ ಬಗ್ಗೆ ಸಭೆಗಳಲ್ಲಿ ಚರ್ಚೆಯಾಗಬೇಕು. ಆಮೂಲಕ ಗೊಂದಲ ನಿವಾರಿಸಿಕೊಳ್ಳ­ಬಹುದು ಎಂದು ಅವರು ಹೇಳಿದರು.ಸಮಿತಿ ಸದಸ್ಯರಾದ ಸುರೇಶ­ಕುಮಾರ್, ಅಖಂಡ ಶ್ರೀನಿವಾಸ್‌ ಸೇರಿದಂತೆ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)