ಸೋಮವಾರ, ಏಪ್ರಿಲ್ 12, 2021
27 °C

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನರಾಯಪಟ್ಟಣ:  ಕನಿಷ್ಠ ರೂ.10 ಸಾವಿರ ವೇತನ, ಸೇವೆ ಕಾಯಂ, ನಿವೃತ್ತಿ ವೇತನ ನಿಗದಿ ಸೇರಿದಂತೆ  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನ ವಾಡಿ ಕಾರ್ಯಕರ್ತೆಯರು ಪಟ್ಟಣ ದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತೆ ಯರು ಮೈಸೂರು ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ತಿಂಗಳಿಗೆ ರೂ.10 ಸಾವಿರ  ವೇತನ ನಿಗದಿಗೊಳಿಸಬೇಕು. `ಸಿ~ ಮತ್ತು `ಡಿ~ ಗ್ರೂಪ್ ನೌಕರರೆಂದುಪರಿಗಣಿಸಿ ಕಾಯಂಗೊಳಿಸಿ ಸರ್ಕಾರಿ ನೌಕರರಿಗೆ ನೀಡುವ ಸವಲತ್ತು ಒದಗಿಸಬೇಕು. ಕೇಂದ್ರ ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೂ ಆರು ತಿಂಗಳು ಹೆರಿಗೆ ರಜೆ ನೀಡಬೇಕು. ಇಲಾಖೆಯ ಸಭೆಗಳಿಗೆ ಹಾಜರಾಗುವ ಕಾರ್ಯಕರ್ತೆಯರಿಗೆ 200 ರೂ. ಭತ್ಯೆ ನೀಡಬೇಕು  ಎಂದು ಆಗ್ರಹಿಸಿದರು.

  ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸಿ.ಎನ್. ಗಂಗಪ್ಪಗೌಡ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ, ಕಾರ್ಯದರ್ಶಿ ಬಿ. ನಾಗರತ್ನಮ್ಮ, ಖಜಾಂಚಿ ಕುಶಾಲಮತಿ ಇದ್ದರು.ಅರಕಲಗೂಡು ವರದಿ: ವಿವಿಧ ಬೇಡಿಕೆಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಬಾಲಕರ ಪದವಿ ಪೂರ್ವ ಕಾಲೇಜು ಆವರಣದಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ಉಪತಹಶೀಲ್ದಾರ್ ರಂಗರಾಜು ಅವರಿಗೆ  ಮನವಿ ನೀಡಿದರು. ತಾಲ್ಲೂಕು ಅಂಗನವಾಡಿ  ಕಾರ್ಯ ಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಅಧ್ಯಕ್ಷೆ ಸೌಭಾಗ್ಯಮ್ಮ ಇದ್ದರು

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.