ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು- ಮಡಿಕೇರಿ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ, ಸೋಶಿಯಲ್ ಡೆಮಾ ಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಹಾಗೂ ಸೆಂಟರ್ ಆಫ್ ಇಂಡಿ ಯನ್ ಟ್ರೇಡ್ ಯೂನಿಯನ್ಸ್ (ಸಿಐ ಟಿಯು) ಜಿಲ್ಲಾ ಸಮಿತಿ ಸದಸ್ಯರು ಬುಧ ವಾರ ಸರಣಿ ಪ್ರತಿಭಟನೆ ನಡೆಸಿದರು.

`ಅಂಕಪಟ್ಟಿ~ಯಲ್ಲಿ ಚುರುಮರಿ ಮಾರಾಟ
ಬಿಜೆಪಿ ಸರ್ಕಾರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದೆ. ವಿಶ್ವವಿದ್ಯಾನಿಲಯಗಳು ಪದವಿ ನೀಡಲು ಮಾತ್ರ ಸೀಮಿತವಾಗಿವೆ ಎಂದು ಆರೋಪಿಸಿದ ಮೈಸೂರು- ಮಡಿಕೇರಿ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಕಲಿ ಅಂಕ ಪಟ್ಟಿಯಲ್ಲಿ ಚುರುಮುರಿ ಮಾರಾಟ ಮಾಡಿ ಗಾಂಧಿಚೌಕದಲ್ಲಿ ಪ್ರತಿಭಟನೆ ಮಾಡಿದರು.

ವಿವಿಗಳು ಪದವೀಧರರನ್ನು ತಯಾರಿಸುವ ಕಾರ್ಖಾನೆಗಳಾಗುತ್ತಿವೆ. ಪ್ರತಿ ವರ್ಷ ಮೈಸೂರು ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪದವಿ ಪೂರೈಸಿ ಉದ್ಯೋಗಕ್ಕಾಗಿ ಅಲೆದಾಡು ತ್ತಿದ್ದಾರೆ. ಸರ್ಕಾರ ಉದ್ಯೋಗಾವಕಾಶ ಸೃಷ್ಟಿಸುವಲ್ಲಿ ವಿಫಲವಾಗಿದ್ದು, ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದೆ. ಅಲ್ಲದೆ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಏರಿಕೆ ಮಾಡುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯವಾಗದಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಇತರ ಇಲಾಖೆ ಅಧಿಕಾರಿಗಳು `ರಾಜಮಾರ್ಗ~ದಲ್ಲಿ ಮಾತ್ರ ಸೈಕಲ್ ಹೊಡೆಯುತ್ತಿದ್ದಾರೆ. ಅದರ ಬದಲು 65 ವಾರ್ಡ್ಗಳಲ್ಲಿ ಸೈಕಲ್ನಲ್ಲಿ ಸಂಚರಿಸಿ ನಾಗರಿಕರ ಸಮಸ್ಯೆ ಆಲಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಎನ್.ಚೇತನ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಶಾಂತ್ಗೌಡ, ಜೆ.ಶ್ರೀನಾಥ್ಬಾಬು, ಅಜಯ್ಶಾಸ್ತ್ರಿ, ಆರ್.ನಾಗೇಂದ್ರ, ಪ್ರಸಾದ್, ರವಿಚಂದ್ರನ್ ಹಾಜರಿದ್ದರು.

ಇಎಸ್ಐ ಆಸ್ಪತ್ರೆ `ಚಿಕಿತ್ಸೆ~ಗೆ ಆಗ್ರಹ: ಹುಣಸೂರು ರಸ್ತೆಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆಯಲ್ಲಿ (ಇಎಸ್ಐ) ಸಿಬ್ಬಂದಿ ಕೊರತೆಯಿಂದ ರೋಗಿಗಳು ನರಳುವಂತಾಗಿದೆ. ಆಸ್ಪತ್ರೆ ಯಲ್ಲಿರುವ ಪ್ರಯೋಗಾಲಯ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಔಷಧಿಗಳು ಲಭ್ಯವಿಲ್ಲ. ಆದ್ದರಿಂದ ಈ ಬಗ್ಗೆ `ತುರ್ತು~ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ಸದಸ್ಯರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದರು.

ಎಕ್ಸ್ರೇ, ಸ್ಕ್ಯಾನಿಂಗ್ ಸೌಲಭ್ಯಗಳು ಸರಿ ಇಲ್ಲದ್ದರಿಂದ ಹೊರಗಡೆ ಮಾಡಿ ಸುವ ಪರಿಸ್ಥಿತಿ ಉದ್ಭವಿಸಿದೆ. ಶಸ್ತ್ರ ಚಿಕಿತ್ಸೆಗೆ ಬೇಕಾದ ಉಪಕರಣಗಳ ಕೊರತೆ ಇದೆ. ರೋಗಿಗಳಿಗೆ ನೀಡುತ್ತಿ ರುವ ಔಷಧಿಗಳು ಗುಣಮಟ್ಟದಿಂದ ಕೂಡಿಲ್ಲ. ಇಎಸ್ಐ ಆಸ್ಪತ್ರೆ ಮೂಲಕ ಕೆಲ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಲಾಗುತ್ತಿದೆ. ಆದ್ದರಿಂದ ಕೂಡಲೇ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಬೇಕು. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.
ಸಿಐಟಿಯು ಅಧ್ಯಕ್ಷ ಸೋಮಶಂಕರ್, ಕಾರ್ಯದರ್ಶಿ ವಿ.ಸೋಮಶಂಕರ್, ಖಜಾಂಚಿ ಎಂ.ಅಣ್ಣಪ್ಪ ಇದ್ದರು.

ಲೋಕಾಯುಕ್ತರ ನೇಮಕಕ್ಕೆ ಒತ್ತಾಯ
ಭ್ರಷ್ಟಾಚಾರದ ವಿರುದ್ಧದ ಹೋರಾ ಟದಲ್ಲಿ ದೇಶಕ್ಕೆ ಮಾದರಿ ಆಗಿರುವ ಕರ್ನಾಟಕದ ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಗಾಂಧಿಚೌಕದಲ್ಲಿ ಪ್ರತಿಭಟಿಸಿದರು.

ರಾಜ್ಯದಲ್ಲಿ ಕಳೆದ ಏಳೆಂಟು ತಿಂಗಳಿನಿಂದ ಲೋಕಾಯುಕ್ತ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ನೇಮಕ ಮಾಡುವ ಇಚ್ಛಾಶಕ್ತಿಯೂ ಸರ್ಕಾರಕ್ಕಿಲ್ಲ. ಯಾವುದೇ ಸಂಸ್ಥೆಯ ಮುಖ್ಯಸ್ಥನ ಹುದ್ದೆ ಖಾಲಿಯಾಗಿದ್ದರೆ ಇಡೀ ಸಂಸ್ಥೆಯ ಕಾರ್ಯ ಚಟುವಟಿಕೆಗಳ ವೇಗಕ್ಕೆ ತಡೆಯಾ ಗುತ್ತದೆ. ಆದ್ದರಿಂದ ಕೂಡಲೇ ಲೋಕಾ ಯುಕ್ತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ತಬ್ರೀಜ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.