ವಿವಿಧ ಸಂಘಟನೆಗಳೊಂದಿಗೆ ಸಮಾಲೋಚನೆ

ಶನಿವಾರ, ಜೂಲೈ 20, 2019
23 °C

ವಿವಿಧ ಸಂಘಟನೆಗಳೊಂದಿಗೆ ಸಮಾಲೋಚನೆ

Published:
Updated:

ಬೆಂಗಳೂರು: 12ನೇ ಪಂಚವಾರ್ಷಿಕ ಯೋಜನೆಯ ಕುರಿತು ದಕ್ಷಿಣ ಭಾರತದ ನಾಗರಿಕ ಸಮಾಜದ ಪ್ರತಿನಿಧಿಗಳು, ಸರ್ಕಾರೇತರ ಸಂಘಟನೆಗಳು (ಎನ್‌ಜಿಒ) ಮತ್ತು ಕಾರ್ಮಿಕ ಸಂಘಟನೆಗಳೊಂದಿಗೆ ಕೇಂದ್ರ ಯೋಜನಾ ಆಯೋಗ ಶನಿವಾರ ಸಮಾಲೋಚನೆ ನಡೆಸಿತು.ಇಲ್ಲಿನ ಖಾಸಗಿ ಹೊಟೆಲ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ರಾಮಚಂದ್ರ ಗೌಡ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ವಿ.ಎಸ್. ಆಚಾರ್ಯ, ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ ಅಧ್ಯಕ್ಷ ಎನ್.ಎಸ್. ಶ್ರೀನಿವಾಸ ಮೂರ್ತಿ, ಯೋಜನಾ ಆಯೋಗದ ಸದಸ್ಯ ಡಾ. ಸೌಮಿತ್ರ ಚೌಧರಿ, ಕಾರ್ಮಿಕರ ಸಂಘಟನೆಯಾದ ಸಿಐಟಿಯು ಪ್ರತಿನಿಧಿಗಳು, ಎನ್‌ಜಿಒ ಪ್ರತಿನಿಧಿಗಳು ಭಾಗವಹಿಸಿದ್ದರು.ಬೆಳಿಗ್ಗೆ ನಡೆದ ಸಭೆಯಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ಎನ್‌ಜಿಒಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಮತ್ತು ಸಮಾಜದ ಎಲ್ಲ ವರ್ಗಗಳ ಆರ್ಥಿಕ ಅಭಿವೃದ್ಧಿಯಲ್ಲಿ ನಾಗರಿಕ ಸಮಾಜದ ಸಂಘಟನೆಗಳ ಪಾತ್ರದ ಕುರಿತು ಚರ್ಚೆ ನಡೆಯಿತು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.ಉತ್ಪಾದನಾ ವಲಯದ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಧ್ಯಾಹ್ನದ ಅವಧಿಯಲ್ಲಿ ಕೈಗಾರಿಕಾ ಪ್ರತಿನಿಧಿಗಳು ಮತ್ತು ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಯಿತು. 12ನೇ ಪಂಚವಾರ್ಷಿಕ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಇರುವ ಅಡಚಣೆಗಳ ಕುರಿತು ಚರ್ಚೆ ನಡೆಯಿತು ಎಂದು ಆಯೋಗದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry